ಗುರುದೇವರಹಳ್ಳಿ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಹೊಸ ಮದ್ದೂರು ಶಾಖಾ ನಾಲೆಯಡಿ ಬರುವ 35ನೇ ವಿತರಣಾ ನಾಲೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ. ಉದಯ್ ಭೂಮಿಪೂಜೆ ನೆರವೇರಿಸಿದರು. ಹರೀಶ್‌ಬಾಬು, ಎ.ಎಸ್.ರಾಜೀವ್, ಬಿ.ಬಸವರಾಜು, ಮೀನ್ ಶಿವಲಿಂಗಯ್ಯ, ದೊಡ್ಡೇಗೌಡ ಇತರರಿದ್ದರು.
Published on:
Copied
Follow Us
ಕೆ.ಎಂ.ದೊಡ್ಡಿ:
ಕಳೆದ ಎರಡು ವರ್ಷಗಳಲ್ಲಿ ನೀರಾವರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಮದ್ದೂರು ಕ್ಷೇತ್ರ ರಾಜ್ಯದಲ್ಲೇ ಮುಂಚೂಣಿಯಲಿದ್ದು ತಾಲೂಕಿನ ರೈತರ ಹಿತಾಸಕ್ತಿ ನನ್ನ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಸಮೀಪದ ಗುರುದೇವರಹಳ್ಳಿ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಹೊಸ ಮದ್ದೂರು ಶಾಖಾ ನಾಲೆಯಡಿ ಬರುವ 35ನೇ ವಿತರಣಾ ನಾಲೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರದಿಂದ ಸಾವಿರ ಕೋಟಿ ರೂ.ಗೂ ಹೆಚ್ಚಿನ ಅನುದಾನ ತಂದು ಕ್ಷೇತ್ರದ ನೀರಾವರಿ ಕ್ಷೇತ್ರದ ಅಭಿವೃದ್ಧಿಯನ್ನು ಕೈಗೊಂಡು ರೈತರ ಪರವಾಗಿ ಅವರ ಅಭಿವೃದ್ಧಿಗಾಗಿ ಕಾರ್ಯನಿರತರಾಗಿದ್ದು ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚಿನ ಅನುದಾನವನ್ನು ತಂದು ನೀರಾವರಿ ಸೌಲಭ್ಯವನ್ನು ಮತ್ತಷ್ಟು ಬಲಪಡಿಸುವ ಮತ್ತು ರೈತರ ಕೃಷಿ ಜಮೀನುಗಳಿಗೆ ಸುಲಭವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದ್ದೆನೆ ಎಂದರು.
ಕಾಮಗಾರಿಯನ್ನು ನಿರ್ವಹಿಸುವ ಗುತ್ತಿಗೆದಾರರಿಗೆ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ ನೀಡಿದ್ದು ಕಾಮಗಾರಿಯಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಮನ್‌ಮುಲ್ ಅಧ್ಯಕ್ಷ ಹರೀಶ್ ಬಾಬು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಮದ್ದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಬಸವರಾಜು, ಎಸ್ಸಿ ಬ್ಲಾಕ್ ವಿಭಾಗದ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೊಡ್ಡೇಗೌಡ, ಮುಖಂಡರಾದ ಬಿ.ಎಸ್ ಬೊರೇಗೌಡ, ಅಪ್ಪಾಜಿ, ಸಿದ್ದೇಗೌಡ, ಅನಿಲ್ ರಾಜು, ಸುನೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು..