ಶ್ರೀಹೊಳೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ

ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಮದ್ವ ನವಮಿ ಪ್ರಯುಕ್ತ ಮಧ್ವಾಚಾರ್ಯರ ಉತ್ಸವ ಭಕ್ತರ  ಸಮ್ಮುಖದಲ್ಲಿ ಸಡಗರ ಸಂಭ್ರಮದ ನೆರವೇರಿತು.
ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಮದ್ವ ನವಮಿ ಪ್ರಯುಕ್ತ ಮಧ್ವಾಚಾರ್ಯರ ಉತ್ಸವ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದ ನೆರವೇರಿತು.
Published on
ಮದ್ದೂರು: íನಗರದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಮಂಗಳವಾರ ಮಧ್ವ ನವಮಿ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವರಿಗೆ ಮಧು ಅಭಿಷೇಕ, ಪಂಚಾಮೃತ ಅಭಿಷೇಕ, ಬೆಣ್ಣೆ ಅಲಂಕಾರ, ಮಧ್ವಾಚಾರ್ಯರ ಉತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಪ್ರದಾನ ಅರ್ಚಕ ಪ್ರದೀಪ್ ಆಚಾರ್ಯ ಪೂಜಾ ಕಾರ್ಯದ ನೇತೃತ್ವ ವಹಿಸಿದ್ದರು. ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ ಮಾಡಲಾಯಿತು.
ಸಹ ಅರ್ಚಕ ಸುರೇಶ್‌ಆಚಾರ್ಯ ಹಾಗೂ ಎಂ.ನರಸಿಂಹಮೂರ್ತಿ, ರುದ್ರಾಕ್ಷಿಪುರ ಗಿರೀಶ್, ಸುರೇಶ್ ಕಾರಂತ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net