ಮ್ಯಾರಥಾನ್‌ಗೂ ಮುನ್ನ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ಹಾಗೂ ಅಧಿಕಾರಿಗಳು ಗೋಪೂಜೆ ಮಾಡಿದರು. ಪ್ರವಾಸಿ ಮಂದಿರದಿಂದ ಪಟ್ಟಣದ ಪ್ರಮುಖ ಬೀದಿಗಳ ಶಿವಪುರ ಸತ್ಯಾಗ್ರಹಸೌಧವರೆಗೆ ಶಾಸಕ ಕೆ.ಎಂ.ಉದಯ್, ಎಂಎಲ್ಸಿ ದಿನೇಶ್‌ಗೌಡ ಅವರು ಕಾಲ್ನಡಿಗೆಯಲ್ಲಿ ಆಗಮಿಸಿ ಮ್ಯಾರಥಾನ್‌ಗೆ ಸಾಥ್ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಶಿಕ್ಷಕರು, ಅಧಿಕಾರಿಗಳು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಶಿವಪುರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು.