ಮದ್ದೂರು ನಗರದ ನಂಜಪ್ಪ ಕಲ್ಯಾಣ ಮಂಟಪದಲ್ಲಿ ಬಜ್ ವುಮೆನ್ ಸಂಸ್ಥೆ ಆಯೋಜಿಸಿದ್ದ ಮಹಿಳಾ ದಿನಾಚರಣೆಯನ್ನು ಜಿ.ಎಸ್.ವೆಂಕಟೇಶ್ ಉದ್ಘಾಟಿಸಿದರು. ನಂದಿನಿ, ಬಾಲಕೃಷ್ಣ, ಜಿ.ಪೂರ್ಣಿಮಾ, ಟಿ.ಪ್ರಸನ್ನಕುಮಾರ್, ಶೋಭಾ ಇದ್ದರು.
ಮದ್ದೂರು : ಮಹಿಳೆಯರು ಸ್ವ ಉದ್ಯೋಗ ಪ್ರಾರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕೆಂದು ಬಜ್ ಇಂಡಿಯಾ ಟ್ರಸ್ಟ್ ಯೋಜನಾ ವ್ಯವಸ್ಥಾಪಕ ಜಿ.ಎಸ್.ವೆಂಕಟೇಶ್ ತಿಳಿಸಿದರು. ನಗರದ ನಂಜಪ್ಪ ಕಲ್ಯಾಣ ಮಂಟಪದಲ್ಲಿ ಬಜ್ ವುಮೆನ್ ಸಂಸ್ಥೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿರುವುದು ಮೆಚ್ಚುಗೆ ವಿಷಯವಾಗಿದೆ. ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ತಮ್ಮ ಇಷ್ಟದ ಕ್ಷೇತ್ರದಲ್ಲಿ ತರಬೇತಿ ಪಡೆದು ಸ್ವ ಉದ್ಯೋಗ ಆರಂಭಿಸಿ ಉತ್ತಮ ಬದುಕು ಕಟ್ಟಿಕೊಳ್ಳಬೇಕೆಂದು ಅವರು ಕಿವಿಮಾತು ಹೇಳಿದರು.
ಸ್ತ್ರೀಯರು ಸ್ವಾವಲಂಬಿಯಾಬೇಕು ಎಂಬ ಉದ್ದೇಶದಿಂದ ಬಜ್ ಇಂಡಿಯಾ ಟ್ರಸ್ಟ್ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಮಹಿಳೆಯರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು
ಅವರು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಂದಿನಿ ಮಾತನಾಡಿ, ಸರ್ಕಾರ ಮತ್ತು ಸಂಘ, ಸಂಸ್ಥೆಗಳು ಮಹಿಳೆಯರಿಗೆ ಹಲವು ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಸದ್ಬಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಮನವಿ ಮಾಡಿದರು.
ಬಜ್ ವುಮೆನ್ ಸಂಸ್ಥೆ ವ್ಯವಸ್ಥಾಪಕ ಬಾಲಕೃಷ್ಣ, ಮಹಿಳಾ ಮುನ್ನಡೆ ಪಡೆಯ ರಾಜ್ಯ ಕಾರ್ಯದರ್ಶಿ ಜಿ.ಪೂರ್ಣಿಮಾ, ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಟಿ.ಪ್ರಸನ್ನಕುಮಾರ್, ಜಿಲ್ಲಾ ಮಹಿಳಾ ಘಟಕದ ಸಂಯೋಜಕಿ ಶೋಭಾ, ಬಜ್ ಸಂಸ್ಥೆಯ ತರಬೇತಿದಾರರು ಇದ್ದರು.