ಉತ್ತಮ ಆಹಾರ ಪದ್ಧತಿ ಅನುಸರಿಸಿ ಆರೋಗ್ಯ ಕಾಪಾಡಿಕೊಳ್ಳಿ

ಕೆ.ಎಂ.ದೊಡ್ಡಿಯ ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನವ ಜೀವನೋತ್ಸವ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ  ಉದ್ಘಾಟಿಸಿದರು. ಕ್ಯಾತಘಟ್ಟ ರವಿಕುಮಾರ್, ಧರಣಿ ಪುಟ್ಟೇಗೌಡ, ಮನೋಜ್, ನಿಖಿತಾ, ರಾಜು, ಸಾಗರ ಮೇಲ್ವಿಚಾರಕಿ ಅಶ್ವಿನಿ, ಭಾರತಿ ಸೇರಿದಂತೆ ಸೇವಾ ಪ್ರತಿನಿಧಿಗಳು ಸಂಘದ ಸದಸ್ಯರು ಹಾಜರಿದ್ದರು.
ಕೆ.ಎಂ.ದೊಡ್ಡಿಯ ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನವ ಜೀವನೋತ್ಸವ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಉದ್ಘಾಟಿಸಿದರು. ಕ್ಯಾತಘಟ್ಟ ರವಿಕುಮಾರ್, ಧರಣಿ ಪುಟ್ಟೇಗೌಡ, ಮನೋಜ್, ನಿಖಿತಾ, ರಾಜು, ಸಾಗರ ಮೇಲ್ವಿಚಾರಕಿ ಅಶ್ವಿನಿ, ಭಾರತಿ ಸೇರಿದಂತೆ ಸೇವಾ ಪ್ರತಿನಿಧಿಗಳು ಸಂಘದ ಸದಸ್ಯರು ಹಾಜರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಸಲಹೆ
  • ಆರೋಗ್ಯ ಉಚಿತ ತಪಾಸಣೆ ಶಿಬಿರ
ಕೆ.ಎಂ.ದೊಡ್ಡಿ: ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಅಭಿಪ್ರಾಯಪಟ್ಟರು.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿಜಿಸ್ಟರ್ ಭಾರತಿನಗರ ವತಿಯಿಂದ ಸ್ಪಂದನ ಆಸ್ಪತ್ರೆ ಮತ್ತು ವರ್ಧಮಾನ ನೇತ್ರಾಲಯ ಸಹಯೋಗದೊಂದಿಗೆ ಭಾನುವಾರ ಆಯೋಜಿಸಿದ್ದ ನವ ಜೀವನೋತ್ಸವ ಮತ್ತು ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪ್ರತಿದಿನ ಹೆಚ್ಚು ನಡೆದಾಡುವ ಅಭ್ಯಾಸ ರೂಢಿಸಿಕೊಳ್ಳುವುದರಿಂದ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನಡೆಸುತ್ತಿರುವ ಆರೋಗ್ಯ ಶಿಬಿರಗಳಿಂದ ಗ್ರಾಮಾಂತರ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದರು.
ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವಾರು ಉಪಯುಕ್ತ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು, ಸಂಘದ ಸದಸ್ಯರೆಲ್ಲರೂ ಆರೋಗ್ಯ ಶಿಬಿರದ ಉಪಯೋಗ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುವರ್ಣ ಭಟ್ ಮಾತನಾಡಿ, ದುಷ್ಟ ಚಟಗಳನ್ನು ಬಿಟ್ಟು ಹೊಸ ಬದುಕನ್ನು ಕಟ್ಟಿಕೊಂಡು ಮದ್ಯಪಾನ ಮುಕ್ತ ಜೀವನವನ್ನು ನಡೆಸುವುದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿ ಆಗಬಹುದು ಎಂದು ತಿಳಿಸಿದರು.
ಮದ್ಯಪಾನ ಮುಕ್ತ ಸಮಾಜ ಮಾಡುವಲ್ಲಿ ನಮ್ಮೆಲ್ಲರ ಸಹಭಾಗಿತ್ವ ಬಹಳಷ್ಟು ಪ್ರಮುಖವಾಗಿರುತ್ತದೆ. ಹಾಗಾಗಿ ಪ್ರತಿ ಕೆಲಸದಲ್ಲಿ ತೊಡಗಿಸಿಕೊಳ್ಳುವಾಗ ನಾವೆಲ್ಲರೂ ಅನ್ನುವುದಕ್ಕಿಂತ ಮುಖ್ಯವಾಗಿ ನಾನು ಎನ್ನುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಬಹುದು ಎಂದರು.
ಮಂಡ್ಯ ಜಿಲ್ಲಾ ಜನಜಾಗೃತಿ ಸದಸ್ಯರಾದ ಕ್ಯಾತಘಟ್ಟ ರವಿಕುಮಾರ್ ಮಾತನಾಡಿ, ದುಶ್ಚಟಗಳನ್ನು ಅಳವಡಿಸಿಕೊಳ್ಳುವುದರಿಂದ ಆಗುವ ದುಷ್ಟ ಪರಿಣಾಮಗಳ ಬಗ್ಗೆ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆ ಜನಜಾಗೃತಿ ಸದಸ್ಯರಾದ ಕ್ಯಾತಘಟ್ಟ ರವಿಕುಮಾರ್, ಧರಣಿ ಪುಟ್ಟೇಗೌಡ, ವೈದ್ಯರಾದ ಮನೋಜ್, ನಿಖಿತಾ, ರಾಜು, ಸಾಗರ, ಮೇಲ್ವಿಚಾರಕಿ ಅಶ್ವಿನಿ, ಭಾರತಿ ಸೇರಿದಂತೆ ಸೇವಾ ಪ್ರತಿನಿಧಿಗಳು ಸಂಘದ ಸದಸ್ಯರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net