ವಂದೇ ಮಾತರಂ ಗಾಯನ ಕಡ್ಡಾಯ ಮಾಡಿ

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸೋಮವಾರ ಆಗಮಿಸಿದ ಶ್ರೀರಂಗಪಟ್ಟಣ ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಬಿಇಒ ಕಚೇರಿ ಸಿಬ್ಬಂದಿಗೆ ಸಲ್ಲಿಸಿ ಸಲ್ಲಿಸಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸೋಮವಾರ ಆಗಮಿಸಿದ ಶ್ರೀರಂಗಪಟ್ಟಣ ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಬಿಇಒ ಕಚೇರಿ ಸಿಬ್ಬಂದಿಗೆ ಸಲ್ಲಿಸಿ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಮನವಿ
ಶ್ರೀರಂಗಪಟ್ಟಣ: ಕೇಂದ್ರ ಸರ್ಕಾರದ ಆದೇಶದಂತೆ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಕಡ್ಡಾಯವಾಗಿ ವಂದೇ ಮಾತರಂ ಗೀತೆಯನ್ನು ವಿದ್ಯಾರ್ಥಿಗಳಿಂದ ಹಾಡಿಸುವ ಆದೇಶವನ್ನು ತಾಲೂಕಿನಲ್ಲೂ ಜಾರಿಗೊಳಿಸುವಂತೆ ಶ್ರೀರಂಗಪಟ್ಟಣ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಒತ್ತಾಯಿಸಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸೋಮವಾರ ಆಗಮಿಸಿದ ಕಾರ್ಯಕರ್ತರು ಹಾಗೂ ಮುಖಂಡರು ವಂದೇ ಮಾತರಂ ಗೀತೆಯನ್ನು ಕಡ್ಡಾಯವಾಗಿ ಹಾಡಲು ನಿರ್ದೇಶನ ನೀಡುವಂತೆ ಕಚೇರಿಯ ಪಂತ್ರಾಂಕಿತ ವ್ಯವಸ್ಥಾಪಕ ಕಾಂತರಾಜು ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆಗ್ರಹಿಸಿದರು.
ವೇದಿಕೆ ಸಂಚಾಲಕ ಚಂದನ್, ವಕೀಲರಾದ ಬಾಲರಾಜ್, ರವೀಶ್, ಸಿದ್ದೇಶ್ , ಬಿಜೆಪಿ ತಾಲೂಕು ಅಧ್ಯಕ್ಷ ಪೀಹಳ್ಳಿ ರಮೇಶ್, ಜೆಡಿಎಸ್ ನಗರ ಯುವ ಘಟಕದ ಅಧ್ಯಕ್ಷ ಗಂಜಾಂ ಸಂಜಯ್, ವೇದಿಕೆಯ ಪ್ರಮುಖರಾದ ಲಕ್ಷ್ಮೀನಾರಾಯಣ, ಸನತ್, ಶಂಕರ್, ಕಿರಣ್, ಪ್ರದೀಪ್ ಮದನ್‌ಗೌಡ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net