ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು ತಾಲೂಕಿನ ನಿಡಘಟ್ಟ ಸಮೀಪದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು.
ಮದ್ದೂರು ತಾಲೂಕಿನ ನಿಡಘಟ್ಟ ಸಮೀಪದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು.
Published on
ಮದ್ದೂರು: ತಾಲೂಕಿನ ನಿಡಘಟ್ಟದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸೋವು ನೋವು ಸಂಭವಿಸಿಲ್ಲ.
ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮದ ರಂಜಿತಾ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ ಸಂಜೆ 5 ಗಂಟೆಗೆ ಸುಮಾರಿಗೆ ವಾಪಸ್ ಶ್ರೀರಂಗಪಟ್ಟಣಕ್ಕೆ ಬರುತ್ತಿದ್ದಾಗ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಾರಿನ ಚಾಲಕ ಕಿರಣ್ ಅವರು ತಕ್ಷಣ ಕಾರಿನಿಂದ ಇಳಿದು ರಂಜಿತಾ ಅವರನ್ನು ಕೆಳಗಿಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸಂಚಾರ ಪಿಎಸ್‌ಐ ರಂಗಸ್ವಾಮಿ ಸ್ಥಳಕ್ಕೆ ಆಗವಿಸಿ ಪ್ರಕರಣ ದಾಖಲಿಸಿಕೊಂಡರಲ್ಲದೆ, ವಾಹನ ತೆರವಿಗೆ ಕ್ರಮವಹಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net