ತಾಲೂಕು ಆಡಳಿತದಿಂದ ಸಂಭ್ರಮದ ಗಣರಾಜ್ಯೋತ್ಸವ

ಮದ್ದೂರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿದರು. ರಾಮಲಿಂಗಯ್ಯ, ಧನಂಜಯ ಇದ್ದರು.
ಮದ್ದೂರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿದರು. ರಾಮಲಿಂಗಯ್ಯ, ಧನಂಜಯ ಇದ್ದರು.
Published on
ಮದ್ದೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದಿಂದ ಆಯೋಜಿಸುವ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲು ಸಭೆ ತೀರ್ಮಾನಿಸಿರುವುದಾಗಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ತಾಲೂಕು ಹಬ್ಬಗಳ ಆಚರಣಾ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಸಂಬಂಧ ಆಯೋಜಿಸಿದ್ದ ಪ್ರಗತಿಪರ ಸಂಘಟನೆಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಜ.26ರಂದು ಸೋಮವಾರ 77ನೇ ಗಣರಾಜ್ಯೋತ್ಸವ ಆಯೋಜಿಸಲಾಗಿದು,್ದ ಧ್ವಜಾರೋಹಣವನ್ನು ಪರಶುರಾಮ್ ಸತ್ತಿಗೇರಿ ನೆರವೇರಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯ ಶಾಸಕ ಕೆ.ಎಂ.ಉದಯ್ ವಹಿಸಲಿದ್ದಾರೆ ಎಂದು ಹೇಳಿದರು.
ಪ್ರತಿವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸುವ ಜತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲು ನಿರ್ಣಯ ಕೈಗೊಂಡಿರುವುದಾಗಿ ಮತ್ತು ಯಾವುದೇ ನ್ಯೂನತೆಗಳು ಕಂಡು ಬಾರದಂತೆ ತಮಗೆ ನೀಡಿದ ಜವಾಬ್ದಾರಿಯನ್ನು ತಾಲೂಕು ಮಟ್ಟದ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ನಗರದ ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯದ ಆವರಣದಿಂದ ವಿದ್ಯಾರ್ಥಿಗಳ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಲಾ ತಂಡಗಳೊಟ್ಟಿಗೆ ಮೆರವಣಿಗೆ ಕೈಗೊಂಡು, ತಾಲೂಕು ಕ್ರೀಡಾಂಗಣ ತಲುಪಿದ ಬಳಿಕ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.
ಸಂಘ ಸಂಸ್ಥೆಯ ಪದಾಧಿಕಾರಿಗಳು, ಗಾಂಧಿವಾದಿಗಳು, ಅಧಿಕಾರಿಗಳು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು. ಸಂಚಾರ ಪೊಲೀಸರು ಮೆರವಣಿಗೆ ವೇಳೆ ಹಾಜರಿದ್ದು, ಯಾವುದೇ ಸಮಸ್ಯೆಯಾಗದಂತೆ ಸುಗಮ ಸಂಚಾರಕ್ಕೆ ಬದಲಿ ಮಾರ್ಗ ನಿಗದಿಪಡಿಸಿ ಮೆರವಣಿಗೆ ಸುಸೂತ್ರವಾಗಿ ಸಾಗಲು ಕ್ರಮ ವಹಿಸಬೇಕು ಎಂದು ಸಭೆಯಲ್ಲಿದ್ದ ಪೊಲೀಸರಿಗೆ ಸೂಚಿಸಿದರು.
ತಾಪಂ ಇಒ ರಾಮಲಿಂಗಯ್ಯ, ಬಿಇಒ ಎಸ್.ಬಿ.ಧನಂಜಯ, ತಾಲೂಕು ಮಟ್ಟದ ಅಧಿಕಾರಿಗಳಾದ ಅರುಣ್‌ಕುಮಾರ್, ನಾಗರಾಜು, ನಾಗರತ್ನ ಹಾಗೂ ಪ್ರಗತಿಪರ ಸಂಘಟನೆಯ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net