ಮಂಡ್ಯ ಜನರ ಪ್ರೀತಿ ವಾತ್ಸಲ್ಯಕ್ಕೆ ಚಿರಋಣಿ

ಹಲಗೂರು ಸಮೀಪದ ಹುಲ್ಲಾಗಾಲ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.
ಹಲಗೂರು ಸಮೀಪದ ಹುಲ್ಲಾಗಾಲ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.
Published on
ಹಲಗೂರು:ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಲು ಮಂಡ್ಯ ಜಿಲ್ಲೆಯ ಜನತೆ ಕಾರಣ. ಜೆಡಿಎಸ್ ಮೇಲೆ ಜನರು ತೋರುವ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಹಲಗೂರು ಸಮೀಪದ ಹುಲ್ಲಾಗಾಲ ಗ್ರಾಮದಲ್ಲಿ ಬಸವೇಶ್ವರಸ್ವಾಮಿ ದೇವಾಲಯದ ವಿಮಾನ ಗೋಪುರ ಮತ್ತು ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸೋಮವಾರ ರಾತ್ರಿ ಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಳೆದ 2018ರಲ್ಲಿ ಮಂಡ್ಯ ಜಿಲ್ಲೆಯಿಂದ ಏಳು ಜನ ಶಾಸಕರನ್ನು ಆಯ್ಕೆ ಮಾಡುವ ಮೂಲಕ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ನೆರವಾಗಿದ್ದನ್ನು ಪಕ್ಷ ಸದಾ ಸ್ಮರಿಸುತ್ತದೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ರಾಜ್ಯದ ಉದ್ದಗಲಕ್ಕೂ ಮತದಾರರು ಅಪೇಕ್ಷೆ ಪಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡಬೇಕು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಮತ್ತಷ್ಟು ಜನಪರ ಕೆಲಸ ಮಾಡಲು ನೆರವಾಗಿ ಎಂದು ಮನವಿ ಮಾಡಿದರು.
ಅದ್ದೂರಿ ಮೆರವಣಿಗೆ: ಗ್ರಾಮಕ್ಕೆ ಆಗಮಿಸಿದ ನಿಖಿಲ್ ಅವರನ್ನು ಗ್ರಾಮದ ಹೊರ ವಲಯದಿಂದ ಎತ್ತಿನಗಾಡಿಯಲ್ಲಿ ಮೆರವಣಿಗೆಯ ಮೂಲಕ ಕರೆ ತರಲಾಯಿತು. ಈ ನಡುವೆ ಅಭಿಮಾನಿಗಳು ಮಾರ್ಗದ ಉದ್ದಕ್ಕೂ ಜೆಸಿಬಿ ಯಂತ್ರದ ಮೇಲೆ ನಿಂತು ಹೂ ಮಳೆ ಸುರಿಸಿದರು. ಗ್ರಾಮದಲ್ಲಿ ಜನರು ತೋರಿದ ಪ್ರೀತಿ, ಅಭಿಮಾನ ಕಂಡು ನಿಖಿಲ್ ಕುಮಾರಸ್ವಾಮಿ ಸಂಭ್ರಮ ವ್ಯಕ್ತಪಡಿಸಿದರು.
ನಿಖಿಲ್ ಕುಮಾರಸ್ವಾಮಿ ಗ್ರಾಮಕ್ಕೆ ಆಗಮಿಸಿದ್ದರಿಂದ ಯುವಕರು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಅನ್ನದಾನಿ, ಜೆಡಿಎಸ್ ಯುವ ಜನತಾ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಕಂಸಾಗರ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net