ನೂತನ ಶವಾಗಾರ ನಿರ್ಮಾಣ: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಶವಾಗಾರ ಶಿಥಿಲವಾಗಿದ್ದು, ಹಳೇ ಮಾದರಿಯಲ್ಲಿದೆ. ಇದನ್ನು ನೂತನವಾಗಿ ನಿರ್ಮಿಸಿಕೊಡಿ ಎಂಬುದು ಸಾರ್ವಜನಿಕರು ಹಾಗೂ ಅಧಿಕಾರಿಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್‌ಗುಂಡುರಾವ್ ಜತೆ ಚರ್ಚಿಸಿ ನೂತನ ಶವಾಗಾರ ನಿರ್ಮಾಣಕ್ಕೆ ಅನುಮೋದನೆ ಪಡೆಯಲಾಗಿತ್ತು. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೈಲಿಯ ಶವಾಗಾರ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.