ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಮಾತನಾಡಿ, ಗರ್ಭಕೋಶ ಕ್ಯಾನ್ಸರ್‌ನಿಂದ ದೇಶದಲ್ಲಿ ಸಾವಿರಾರು ಮಂದಿ ನರಳುತ್ತಿದ್ದಾರೆ. ಈ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದಾಗಿದೆ. ದೇಶದಲ್ಲಿ ಪ್ರತಿವರ್ಷ 1.23 ಲಕ್ಷ ಜನ ಈ ರೋಗಕ್ಕೆ ಒಳಗಾಗುತ್ತಿದ್ದಾರೆ. ಈ ಪೈಕಿ 7,7300 ಜನ ಪ್ರತಿ ವರ್ಷ ಸಾವನ್ನಪ್ಪುತ್ತಿದ್ದಾರೆ. ಈ ಕ್ಯಾನ್ಸರ್ ಸಂಪೂರ್ಣವಾಗಿ ಗುಣಪಡಿಸಬಹುದಾದ ರೋಗವಾಗಿದ್ದು, ಈ ರೋಗ ಬರಲು ಕಾರಣ ಅಕಾಲಿಕ ವಿವಾಹ, ಹೆಚ್ಚು ಮಕ್ಕಳ ಜನನ, ಸ್ವಚ್ಛತೆಯ ಕೊರತೆಯಿಂದಾಗಿದೆ. ಇದು ಲೈಂಗಿಕ ರೋಗವಾಗಿದ್ದು, ರೋಗ ಲಕ್ಷಣಗಳು ಕೆಲವೊಮ್ಮೆ ಕಂಡುಬರುವುದಿಲ್ಲ. ತಪಾಸಣೆಗೊಳಪಟ್ಟಾಗಷ್ಟೆ ಈ ರೋಗ ಪತ್ತೆಹಚ್ಚಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಮಹಿಳೆಯು 3 ವರ್ಷಕ್ಕೊಮ್ಮೆ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.