ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವನಂಜಯ್ಯ ಅವಿರೋಧ ಆಯ್ಕೆ

ಮದ್ದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳನ್ನು ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮು, ಕಾರ್ಯದರ್ಶಿ ಕೆರಗೋಡು ಸೋಮಶೇಖರ್ ಅಭಿನಂದಿಸಿದರು. ಕೆ.ಸಿ.ಮಂಜುನಾಥ್, ರವಿ ಸಾವಂದಿಪುರ, ಮಂಜುನಾಥ್, ಎಸ್.ಪುಟ್ಟಸ್ವಾಮಿ ಇತರರಿದ್ದರು.
ಮದ್ದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳನ್ನು ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮು, ಕಾರ್ಯದರ್ಶಿ ಕೆರಗೋಡು ಸೋಮಶೇಖರ್ ಅಭಿನಂದಿಸಿದರು. ಕೆ.ಸಿ.ಮಂಜುನಾಥ್, ರವಿ ಸಾವಂದಿಪುರ, ಮಂಜುನಾಥ್, ಎಸ್.ಪುಟ್ಟಸ್ವಾಮಿ ಇತರರಿದ್ದರು.
Published on
ಮದ್ದೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶಿವನಂಜಯ್ಯ ಅವಿರೋಧವಾಗಿ ಆಯ್ಕೆಯಾದರು.
ನಗರದ ಪ್ರವಾಸಿ ಮಂದಿರದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ರಾಘವೇಂದ್ರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ವಿವಿಧ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಶಿವನಂಜಪ್ಪ, ಉಪಾಧ್ಯಕ್ಷರಾಗಿ ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಆರ್.ಚಕ್ರಪಾಣಿ, ಕಾರ್ಯದರ್ಶಿಯಾಗಿ ಎಂ.ಪಿ.ವೆಂಕಟೇಶ್, ಖಜಾಂಚಿಯಾಗಿ ಪಿ.ನಂದೀಶ್ ಅವರನ್ನು ಚುನಾವಣಾಧಿಕಾರಿಯಾಗಿ ಜಿಲ್ಲಾ ಉಪಾಧ್ಯಕ್ಷ ಚಿನಕುರಳಿ ಲೋಕೇಶ್ ಘೋಷಣೆ ಮಾಡಿದರು.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ನೂತನ ಪದಾಧಿಕಾರಿಗಳು ಸಂಘದ ಎಲ್ಲಾ ಸದಸ್ಯರನ್ನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಸಂಘಕ್ಕೆ ಹಾಗೂ ಪತ್ರಕರ್ತರಿಗೆ ಒಳ್ಳೆಯದಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.
ರಾಜ್ಯ ಸಂಘದ ಕಾರ್ಯದರ್ಶಿ ಕೆರಗೋಡು ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷರಾದ ಕೆ.ಸಿ.ಮಂಜುನಾಥ್, ರವಿ ಸಾವಂದಿಪುರ, ಕಾರ್ಯದರ್ಶಿ ನಿರ್ದೇಶಕರಾದ ಎಸ್.ಪುಟ್ಟಸ್ವಾಮಿ, ಪತ್ರಕರ್ತರಾದ ಮಂಜುನಾಥ್, ನಾಗೇಶ್, ಮೋಹನ್, ಶಿವರಾಜ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net