ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಕೆ.ಆರ್.ಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಬಿ.ಕುಮಾರ್ 2024-25ಸಾಲಿನ  ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಚಂದ್ರು ಸೇರಿದಂತೆ ಉಪನ್ಯಾಸಕರು ಇದ್ದರು.

Published on
ಕೆ.ಆರ್.ಸಾಗರ: ಕೆ.ಆರ್.ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಶಾರದಾ ಪೂಜೆ ಸಮಾರಂಭ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಮೊದಲಿಗೆ ಶಾರದಾ ಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಕ್ರಮಕ್ಕೆ ಚಾಲನೆ ನೀಡಿದರು. ನಂತರ 2025-26ನೇ ಸಾಲಿನ ಕಾಲೇಜಿನ ಚಟುವಟಿಕೆಗಳ ಬಗ್ಗೆ ಉಪನ್ಯಾಸಕರು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಬಿ.ಕುಮಾರ್ 2024-25 ಸಾಲಿನ ದ್ವೀತಿಯ ಪಿಯು ಪರೀಕ್ಷೆಯಲ್ಲಿ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿ, ವಿದ್ಯಾರ್ಥಿಗಳು ತಾವುಗಳು ಕೇವಲ ಅಂಕಗಳು ಮತ್ತು ರ‌್ಯಾಂಕ್ ಪಡೆಯಲು ಸೀಮಿತಗೊಳ್ಳದೆ, ಪಠ್ಯೇತರ ಚಟುವಟಿಕೆಗಳಲ್ಲಿ ಕೌಶಲ ಹೊಂದಬೇಕು. ಇದರಿಂದ ಜ್ಞಾನ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು. ನಂತರ ಪಿಯು ವಿದ್ಯಾರ್ಥಿಗಳು ಸಾಂಸ್ಕೃತಿ ಚಟುವಟಿಕೆ ನಡೆಸಿಕೊಟ್ಟರು. ಪ್ರಭಾರ ಪ್ರಾಂಶುಪಾಲ ಚಂದ್ರು, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net