ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಆಯೋಜಿಸಲಾಗಿತ್ತು. ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ದಿನೇಶ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್‌ಕುಮಾರ್ ಇತರರಿದ್ದರು.
Published on:
Copied
Follow Us
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಮೂಲಕ ಮೂಲಕ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗಮಂಗಲ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು ಭೂಮಿ ಗುರುತಿಸಿ ಎಂದು ಹೇಳಿದರು.
ಪಾಂಡವಪುರ ತಾಲೂಕು ಮಾಣಿಕ್ಯನಹಳ್ಳಿಯಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲು ಕಂದಾಯ ಇಲಾಖೆಯಲ್ಲಿ ಲಭ್ಯವಿರುವ ಜಾಗವನ್ನು ಕೈಗಾರಿಕಾ ಇಲಾಖೆಗೆ ಹಸ್ತಾಂತರಿಸಬೇಕು. ಮಳವಳ್ಳಿ ತಾಲೂಕಿನಲ್ಲಿ 563 ಎಕರೆ ಜಾಗವನ್ನು ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿಗಳು ಗುರುತಿಸಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳು ಹಾಗೂ ಕೈಗಾರಿಕಾ ವಸಾಹತುಗಳು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ದಿನೇಶ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್‌ಕುಮಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.