ಕೃಷಿ, ಗ್ರಾಮೀಣ ಕಾರ್ಮಿಕರಿಂದ ಪ್ರತಿಭಟನೆ

ಮಂಡ್ಯ ನಗರದ ಡಿಸಿ ಕಚೇರಿ ಎದುರು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು.
ಮಂಡ್ಯ ನಗರದ ಡಿಸಿ ಕಚೇರಿ ಎದುರು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು.
Published on
ಮಂಡ್ಯ: ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡುವ ಕೇಂದ್ರ ಸರ್ಕಾರ ನಿರ್ಧಾರ ಖಂಡಿಸಿ ಮಂಗಳವಾರ ನಗರದಲ್ಲಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಡಿಸಿ ಡಾ.ಕುಮಾರ ಅವರ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
2004-2005ರಲ್ಲಿ ಎಡಪಕ್ಷಗಳ ಬೆಂಬಲದ ಮೇಲೆ ಆಧಾರವಾಗಿದ್ದ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿತ್ತು. ಈ ಕಾಯ್ದೆ ಗ್ರಾಮೀಣ ಭಾಗದ ಕೃಷಿ ಕೂಲಿಕಾರರು, ಬಡ ರೈತರು ಹಾಗೂ ಇನ್ನಿತರ ಗ್ರಾಮೀಣ ದುಡಿಮೆಗಾರರಲ್ಲಿ ಶೇ.30 ರಷ್ಟು ಜನರು ತಮ್ಮ ಜೀವನೋಪಯಕ್ಕೆ ಅವಲಂಬಿದ್ದರು. ಆದರೆ ಈಗ ಕೇಂದ್ರ ಸರ್ಕಾರ ನರೇಗಾ ಹೆಸರು ಹಾಗೂ ಸ್ವರೂಪವನ್ನು ತೆಗೆದುಹಾಕಿ ಕೇವಲ ಸರ್ಕಾರದ ಅಣತಿಯ ಯೋಜನೆಯಾಗಿ ಹೊಸದಾಗಿ ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಗ್ರಾಮೀಣ ಖಾತ್ರಿ ವಿ.ಬಿ.ಜಿ. ರಾಮ್‌ಜಿ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಿಂದ ಕೂಲಿಕಾರರ ಮೇಲೆ ಹಲವು ದುಷ್ಪರಿಣಾಮಗಳು ಬೀರುತ್ತವೆ ಎಂದು ದೂರಿದರು.
ಕೇಂದ್ರ ಸರ್ಕಾರ ಶೇ.60, ರಾಜ್ಯಸರ್ಕಾರ ಶೇ.40ರಷ್ಟು ಮೊತ್ತವನ್ನು ಖರ್ಚು ಮಾಡಬೇಕೆಂಬ ಅಂಶಗಳಿಂದ ಕೂಲಿಕಾರರಿಗೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಹಣ ನೀಡಿಲ್ಲವೆಂದು, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವು ಹಣ ಕೊಟ್ಟಿಲ್ಲವೆಂದು ಹೇಳುವ ಮೂಲಕ ಕೂಲಿ ಕಾರ್ಮಿಕರನ್ನು ಕೂಲಿಯಿಂದ ವಂಚಿತರಾಗಿ ಮಾಡುತ್ತದೆ. ಈ ಹೊಸ ಕಾಯ್ದೆಯು ಉದ್ಯೋಗ ಖಾತ್ರಿಯನ್ನು ಮುಂದಿನ ದಿನಗಳಲ್ಲಿ ತೆಗೆದುಹಾಕುವ ಹುನ್ನಾರವಾಗಿದೆ. ಆದ್ದರಿಂದ 2005ರಲ್ಲಿ ಇದ್ದ ಕಾಯ್ದೆಯನ್ನು ಮುಂದುವರಿಸಲು ಮತ್ತು ದಿನಕ್ಕೆ 600 ರೂ ಕೂಲಿ 200 ಮಾನವ ದಿನ ಕೆಲಸ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಿವಮಲ್ಲಯ್ಯ, ಬಿ.ಹನುಮೇಶ್, ರಾಜು, ಶುಭವತಿ, ಆನಂದ್, ಅರುಣ್‌ಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net