ಈ ಮೊದಲು ನೀಡಿದ್ದ ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, 19,94,200 ರೂ. ಮೊತ್ತದ ಚೆಕ್ಕನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೆ ಕೆಲಸ ಮಾಡುವುದು ಕಷ್ಟ. ನಿಮ್ಮ ನೋವು ನನಗೆ ಅರ್ಥವಾಗಿದೆ, ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದರು.