ಅಭಿವೃದ್ಧಿ ಮೆಚ್ಚಿ ಹಲವರು ಕಾಂಗ್ರೆಸ್ ಸೇರ್ಪಡೆ

 ಹೊಸುರು ಗ್ರಾಮದ ಹಲವು ಮುಖಂಡರು ಜೆಡಿಎಸ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಹೊಸುರು ಗ್ರಾಮದ ಹಲವು ಮುಖಂಡರು ಜೆಡಿಎಸ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
Published on
ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜೆಡಿಎಸ್ ಮತ್ತು ಬಿಜೆಪಿಯ ಹಲವು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಹೇಳಿದರು.
ಸಮೀಪದ ಎಸ್.ಐ. ಹೊನ್ನಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್.ಹೊಸೂರು ಗ್ರಾಮದ ಜೆಡಿಎಸ್ ಮುಖಂಡ ಮಹೇಶ್ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಹಲವು ಮುಖಂಡರು ಹಾಗೂ ಕಾರ್ಯಕರ್ತರನ್ನು ಸ್ವಾಗತಿಸಿ ಮಾತನಾಡಿದರು.
ಕಾಂಗ್ರೆಸ್ ತತ್ವ, ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಯಾವುದೇ ಪಕ್ಷದವರು ಬಂದರೂ ಕಾಂಗ್ರೆಸ್‌ಗೆ ಮುಕ್ತವಾಗಿ ಆಹ್ವಾನಿಸುತ್ತೇನೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಜನಪರ ಆಡಳಿತ, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಅನ್ಯ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರಿದ್ದಾರೆ ಎಂದು ತಿಳಿಸಿದರು.
ತಾಲೂಕಿನ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಸರ್ಕಾರದಿಂದ ಸಾವಿರಾರು ಕೋಟಿ ರೂ. ಅನುದಾನ ತಂದು ಕೆಲಸ ಮಾಡುತ್ತಿದ್ದೇನೆ. ಕಾರ್ಯಕರ್ತರು, ಮುಖಂಡರು ತಳ ಮಟ್ಟದಲ್ಲಿ ಪಕ್ಷ ಸಂಘಟಿಸಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಕಾರ್ಯ ಪ್ರವತ್ತರಾಗಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಎಚ್.ಹೊಸೂರು ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಹೇಶ್ ನಾಗರಾಜು, ಚಿಕ್ಕಿರಯ್ಯ, ರಾಮಣ್ಣ, ಬಸವಲಿಂಗ , ಈರೇಗೌಡ, ಶಿವು, ಎಸ್.ಐ ಹೊನ್ನಲಗೆರೆ ಗ್ರಾಮದ ರಾಜು, ಪುನಿ, ಮರಿಸ್ವಾಮಿ , ಚಿನ್ನಸ್ವಾಮಿ ಅವರಿಗೆ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಮನ್ಮುಲ್ ನಿರ್ದೇಶಕ ಹರಿಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಮುಖಂಡ ಹರೀಶ್ ಪಾಪಣ್ಣ, ಸಿದ್ದರಾಜು, ನಂದೀಶ್ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net