ಮೆಕಾನಿಕಲ್ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಬಿ.ಗಿರೀಶ್ ಮಾತನಾಡಿ, 2018ರಲ್ಲಿ ಸ್ಥಾಪನೆಯಾದ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ನ್ಯಾಕ್‌ನಿಂದ ಎ-ಪ್ಲಸ್ ಶ್ರೇಣಿಯ ಮಾನ್ಯತೆ ಪಡೆದಿರುವ ನಮ್ಮ ವಿಶ್ವವಿದ್ಯಾಲಯವು ಶೈಕ್ಷಣಿಕ ಶ್ರೇಷ್ಠತೆಯ ಪ್ರತೀಕವಾಗಿದೆ. ಈ ಕಾರ್ಯಕ್ರಮದಲ್ಲಿ 173ಪೋಸ್ಟರ್ ಪ್ರಸ್ತುತಿಗಳು ಹಾಗೂ 254 ವಿದ್ಯಾರ್ಥಿ ಪ್ರಾಜೆಕ್ಟ್‌ಗಳು ಪ್ರದರ್ಶನಗೊಳ್ಳಲಿವೆ. ವಿದ್ಯಾರ್ಥಿಗಳ ಸಂಶೋಧನಾ ಸಾಮರ್ಥ್ಯ, ನವೀನ ಆವಿಷ್ಕಾರಗಳು ಮತ್ತು ಸಮಾಜಮುಖಿ ತಂತ್ರಜ್ಞಾನ ಪರಿಹಾರಗಳಿಗೆ ವೇದಿಕೆ ಕಲ್ಪಿಸಲಾಗಿದೆ. ಇಷ್ಟು ಮಾತ್ರವಲ್ಲದೆ ತಜ್ಞರೊಂದಿಗೆ ಜ್ಞಾನ ವಿನಿಮಯ ಹಾಗೂ ಕೈಗಾರಿಕಾ, ಶೈಕ್ಷಣಿಕ ಸಂಸ್ಥೆಗಳ ಸಹಯೋಗಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.