ಮದ್ದೂರು ತಾಲೂಕಿನ ಕೊಪ್ಪದಲ್ಲಿ ಕೆ.ಎನ್.ದಿವಾಕರ್ ಅವರ ಹುಟ್ಟುಹಬ್ಬದ ಅಂಗವಾಗಿ ಹಿರಿಯ ನಾಗರಿಕರನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್‌ಎನ್.ಚಲುವರಾಯಸ್ವಾಮಿ ಅಭಿನಂದಿಸಿದರು. ಕೆ.ಎನ್.ದಿವಾಕರ್, ಕೆ.ಸಿ.ಜೋಗಿಗೌಡ, ಚಿಕ್ಕೊನಹಳ್ಳಿ ತಮ್ಮಯ್ಯ, ಕುಮಾರ್‌ಕೊಪ್ಪ, ಬೆಕ್ಕಳಲೆ ರಘು, ತೋಯಾಜಾಕ್ಷ, ವಿಜಯ್‌ಗೌಡ ಸೇರಿದಂತೆ ಇತರರು ಇದ್ದರು.
Published on:
Copied
Follow Us
ಮದ್ದೂರು:ಹುಟ್ಟುಹಬ್ಬವನ್ನು ಮೋಜು ಮಸ್ತಿಗಾಗಿ ಮೀಸಲಿಡದೆ, ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದವರ ಬಾಳಿಗೆ ಆಸರೆಯಾಗಬೇಕೆಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್‌ಎನ್.ಚಲುವರಾಯಸ್ವಾಮಿ ತಿಳಿಸಿದರು.
ತಾಲೂಕಿನ ಕೊಪ್ಪದ ಶ್ರೀ ಪಟ್ಟಲದಮ್ಮ ದೇಗುಲದ ಆವರಣದಲ್ಲಿ ಮಂಗಳವಾರ ರಾತ್ರಿ ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ (ದಿವಿ) ಅವರ ಹುಟ್ಟುಹಬ್ಬ ಅಂಗವಾಗಿ ಕೊಪ್ಪ 1 ಮತ್ತು 2ನೇ ವೃತ್ತದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಕೆ.ಎನ್.ದಿವಾಕರ್ ಅವರು ತಮ್ಮ ಹುಟ್ಟುಹಬ್ಬವನ್ನು ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣೆ, ಹಿರಿಯ ನಾಗರಿಕರಿಗೆ ಸನ್ಮಾನ, ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರ್ಥಗರ್ಭಿತವಾಗಿ ಆಚರಣೆ ಮಾಡಿಕೊಳ್ಳುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆ.ಎನ್.ದಿವಾಕರ್ ಅವರು ಗ್ರಾಮಾಂತರ ಪ್ರದೇಶದ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ ಗ್ರಾಪಂ ಸದಸ್ಯರಾಗಿ, ನಾಗಮಂಗಲ ಗ್ರಾಮಾಂತರ ಪ್ರದೇಶದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಾ ಜನರ ನೋವು ನಲಿವುಗಳಿಗೆ ಸ್ಪಂದಿಸುವ ವ್ಯಕ್ತಿತ್ವ ಹೊಂದಿರುವುದು ಸಂತೋಷದ ವಿಷಯ ಎಂದರು.
ಕೆ.ಎನ್.ದಿವಾಕರ್ ಅವರಿಗೆ ಭಗವಂತ ರಾಜಕೀಯವಾಗಿ ಮತ್ತಷ್ಟು ಶಕ್ತಿ ನೀಡಲು ಮತ್ತು ಈ ಭಾಗದ ಜನರಿಗೆ ಮತ್ತಷ್ಟು ಸ್ಪಂದಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.