ಹೊಳೆ ಆಂಜನೇಯಸ್ವಾಮಿಗೆ ರಥ ಸಪ್ತಮಿ ಪೂಜೆ

ರಥ ಸಪ್ತಮಿ ಅಂಗವಾಗಿ ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಮಾಡಿರುವುದು.
ರಥ ಸಪ್ತಮಿ ಅಂಗವಾಗಿ ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಮಾಡಿರುವುದು.
Published on
ಮದ್ದೂರು : ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಭಾನುವಾರ ರಥ ಸಪ್ತಮಿ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವರಿಗೆ ಮಧು ಅಭಿಷೇಕ, ಪಂಚಾಮೃತ ಅಭಿಷೇಕ, ಬೆಣ್ಣೆ ಅಲಂಕಾರ, ಬೆಳಗ್ಗೆ ಸೂರ್ಯಮಂಡಲ ಉತ್ಸವ, ಸಾಯಂಕಾಲ ಚಂದ್ರಮಂಡಲ ಉತ್ಸವ ಜರುಗಿತು.
ನಂತರ ಆಗಮಿಸಿದ ಸಹಸ್ರಾರು ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಧಾರ್ಮಿಕ ಕಾರ್ಯಕ್ರಮದ ನೇತೃತ್ವವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net