ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಕ್ರಮ

 ಎಸ್.ಐ.ಹಾಗಲಹಳ್ಳಿಯಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ಎ.ಎಸ್.ರಾಜೀವ್, ಹರೀಶ್ ಬಾಬು, ಆರ್.ಭಾಗ್ಯಾ, ಅರುಣ್ ಕುಮಾರ್ ಇದ್ದರು.
ಎಸ್.ಐ.ಹಾಗಲಹಳ್ಳಿಯಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ಎ.ಎಸ್.ರಾಜೀವ್, ಹರೀಶ್ ಬಾಬು, ಆರ್.ಭಾಗ್ಯಾ, ಅರುಣ್ ಕುಮಾರ್ ಇದ್ದರು.
Published on
ಕೆ.ಎಂ.ದೊಡ್ಡಿ: ಮಕ್ಕಳ ಶ್ರೇಯೋಭಿವೃದ್ಧಿಗೆ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದೆ. ಶಿಕ್ಷಕಿಯರು ಚಿಕ್ಕ ಮಕ್ಕಳನ್ನು ತಾಯಿಯಂತೆ ಪಾಲನೆ ಮಾಡಿ ಪಾಲಕರ ಮೆಚ್ಚುಗೆ ಗಳಿಸಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಎಸ್.ಐ.ಹಾಗಲಹಳ್ಳಿಯಲ್ಲಿ ಎಸ್‌ಡಿಪಿ ನರೇಗಾ ಯೋಜನೆಯಡಿ 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿ ಶಿಕ್ಷಣ ಮಕ್ಕಳ ವಿದ್ಯಾಭ್ಯಾಕ್ಕೆ ಮೊದಲ ಮೆಟ್ಟಿಲು. ಹೀಗಾಗಿ ಅವರ ಸರ್ವತೋಮುಖ ಬೆಳವಣಿಗೆಗಾಗಿ ಅಂಗನವಾಡಿ ಕಟ್ಟಡ ನಿರ್ಮಿಸಿ ಮಕ್ಕಳ ಕಲಿಕೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಶಿಕ್ಷಕಿಯರು ಮಕ್ಕಳನ್ನು ತಾಯಿಯಂತೆ ಪಾಲನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳ ನಿರ್ಮಾಣ ಮತ್ತು ದುರಸ್ತಿಗೆ ಕ್ರಮ ವಹಿಸಲಾಗಿದೆ. ಸದ್ಯಕ್ಕೆ ಅಂಗನವಾಡಿ ಸ್ಥಿತಿ ಸುಧಾರಿಸಿದೆ. ಸದ್ಯದಲ್ಲೇ ಅನುದಾನ ಬಿಡುಗಡೆ ಮಾಡಿ ಕಾಂಪೌಂಡ್ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಅಂಗನಾವಡಿ ಮೇಲ್ವಿಚಾರಕಿ ಆರ್.ಭಾಗ್ಯಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಣ್ ಕುಮಾರ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಚಮ್ಮ, ಕಾರ್ಯನಿರ್ವಾಹಕ ಇಂಜಿನಿಯರ್ ಹನುಮಂತು, ಶೇಖರ್, ವಿಶ್ವನಾಥ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net