ನಗರದ ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಭವನದಲ್ಲಿ ಆಯೋಜಿಸಿದ್ದ ಎಸ್‌ಐಆರ್ ಪ್ರಕ್ರಿಯೆಯಡಿ ಕೈಗೊಂಡಿರುವ ಕಾರ್ಯಗಳ ಪ್ರಗತಿ, ನೋಟಿಸ್ ಜಾರಿ, ದಾಖಲೆಗಳ ಪರಿಶೀಲನೆ ಹಾಗೂ ಮುಂದಿನ ಹಂತದ ಕಾರ್ಯಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಡಿ 1,50,269 ಜನರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಹಾಗೂ ಅರ್ಹತೆ ದೃಢೀಕರಣ ಕಾರ್ಯವನ್ನು ನಿಯಮಾನುಸಾರ ಹಾಗೂ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.