ಮಳಿಗೆಗಳಲ್ಲಿ ರಸಗೊಬ್ಬರಗಳ ದಾಸ್ತಾನು ಹಾಗೂ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಜಿಲ್ಲೆಯ ಎಲ್ಲ ರಸಗೊಬ್ಬರ ಪರಿವೀಕ್ಷಕರು, ಕಡ್ಡಾಯವಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಮಳಿಗೆಗಳಿಗೆ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಬೇಕು. ಹಾಗೂ ಅಭಾವ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಆಗಬೇಕು. ರಸಗೊಬ್ಬರ ಪರ್ಯಾಯವಾಗಿ ಹಸಿರೆಲೆ ಗೊಬ್ಬರ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು. ರೈತರಿಗೆ ಸಮಯಕ್ಕೆ ತಕ್ಕಂತೆ ಬೀಜ, ಗೊಬ್ಬರ ಮತ್ತು ಕೀಟನಾಶಕ ಸೇರಿದಂತೆ ಇತರೆ ಕೃಷಿ ಸಾಮಗ್ರಿಗಳು ದೊರಕುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.