ಜಿಲ್ಲೆಯಲ್ಲಿನ ನೀರು ಇರುವ ಕೆರೆಗಳನ್ನು ಗುರುತಿಸಿ. ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರಿಶೀಲನಾ ಪರೀಕ್ಷೆ ನಡೆಸಬೇಕು. ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಗಳ ನೀರಿನ ಸಂರಕ್ಷಣೆಯನ್ನು ಕಡ್ಡಾಯವಾಗಿ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಕೆರೆಯ ಒತ್ತುವರಿ ಸಂಬಂಧ ಕುರಿತು ಸಾರ್ವಜನಿಕ ದೂರು ಬಂದಲ್ಲಿ ಪ್ರಥಮ ಆದ್ಯತೆ ಮೇರೆಗೆ ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಎಚ್‌ಎಲ್ಬಿಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ರಾಜಕಾಲುವೆ ಹಾಗೂ ನಾಲೆಗಳ ಒತ್ತುವರಿಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದರು.