ಮೈಶುಗರ್ ವ್ಯಾಪ್ತಿಯ ಹಳ್ಳಿಯಲ್ಲಿ ಜನಾಂದೋಲನ: ವಿವಿಧ ಸಂಘಟನೆಗಳ ನಿರ್ಣಯ

ಮೈಶುಗರ್ ಕಾರ್ಖಾನೆಗೆ ಸಂಬಂಧಿಸಿದಂತೆ ಚರ್ಚಿಸಲು ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆ ಆಯೋಜಿಸಲಾಗಿತ್ತು.
ಮೈಶುಗರ್ ಕಾರ್ಖಾನೆಗೆ ಸಂಬಂಧಿಸಿದಂತೆ ಚರ್ಚಿಸಲು ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ನಗರದ ಪ್ರವಾಸಿ ಮಂದಿರದಲ್ಲಿ ಸಭೆ
  • ರೈತ ಹಾಗೂ ಕನ್ನಡ ಸಂಘಟನೆಗಳು ಭಾಗಿ
ಮಂಡ್ಯ: ಮೈಶುಗರ್ ಉಳಿವಿಗಾಗಿ ಕಾರ್ಖಾನೆ ವ್ಯಾಪ್ತಿಯ 110 ಹಳ್ಳಿಗಳಲ್ಲಿ ಜನಾಂದೋಲನ ಜಾಥಾ ನಡೆಸಲು ರೈತ ಹಾಗೂ ಕನ್ನಡ ಸಂಘಟನೆಗಳು ನಿರ್ಣಯ ಕೈಗೊಂಡಿವೆ.
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಹಲವು ವಿಷಯದ ಬಗ್ಗೆ ಚರ್ಚೆ ನಡೆಸಲಾಯಿತು. ಮೈಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಸಾತನೂರು ವೇಣುಗೋಪಾಲ್ ಮಾತನಾಡಿ, ಮೈಶುಗರ್‌ನಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದರೂ ಆಡಳಿತಾರೂಢ ಪಕ್ಷದ ಜತೆಗೆ ವಿರೋಧ ಪಕ್ಷಗಳು ಮೌನವಹಿಸಿವೆ. ಸಂಘಟನೆಗಳು ವಿರೋಧ ಪಕ್ಷಗಳ ಪಾತ್ರವಹಿಸುತ್ತಿವೆ. ಯಾವುದೇ ಕಾರಣಕ್ಕೂ ಮೈಶುಗರ್ ಆಸ್ತಿಯನ್ನು ನಿಯಮಬಾಹಿರವಾಗಿ ವಿಲೇವಾರಿ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂಬ ಗಟ್ಟಿಯಾದ ಸಂದೇಶವನ್ನು ನೀಡಬೇಕಿದೆ ಎಂದರು.
ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್‌ರಾಜ್ ಮಾತನಾಡಿ, ಮೈಶುಗರ್ ಕಾರ್ಖಾನೆ ಕೇವಲ ಮಂಡ್ಯ ಜಿಲ್ಲೆಗೆ ಸಿಮೀತವಾದುದಲ್ಲ. ಅದನ್ನು ಕರ್ನಾಟಕದ ಮಾದರಿ ಕಾರ್ಖಾನೆಯಾಗಿ ರೂಪಿಸಲು ಹಾಗೂ ಆಧುನೀಕರಣಕ್ಕೆ ಅಗತ್ಯ ಜನಾಭಿಪ್ರಾಯ ರೂಪಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಕೃಷ್ಣ, ಕರುನಾಡ ಸೇವಕರು ಸಂಘಟನೆಯ ರಾಜೇಂದ್ರ ಸಿಂಗ್ ಬಾಬು, ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ, ಕರವೇ (ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ, ಕರವೇ (ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಎಸ್.ಡಿ. ವೇಣು, ದೇವರಾಜ ಅರಸ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ನಾಗರತ್ನ, ಕರವೇ ಗೌರವಾಧ್ಯಕ್ಷೆ ಸುಜಾತಾ ಕೃಷ್ಣ, ಸಿಐಟಿಯು ಸಿ.ಕುಮಾರಿ, ಸಿಪಿಎಂ ಪಕ್ಷದ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ, ಜೈ ಕರ್ನಾಟಕ ಪರಿಷತ್ ರಾಜ್ಯ ಮುಖಂಡ ಎಸ್. ನಾರಾಯಣ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net