ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,04,659 ಮತದಾರರಿದ್ದು, ಈವರೆಗೆ 1,74,461 ಮತದಾರರ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮೃತರು, ಸ್ಥಳಾಂತರಗೊಂಡಿರುವ 2,558 ಮತದಾರರನ್ನು ಪಟ್ಟಿಯಿಂದ ತೆಗೆಲಾಗಿದೆ. ಒಂದೇ ಹೆಸರಿನ 358 ಮತದಾರರು ಹಾಗೂ ಒಂದೇ ತರಹ ಭಾವಚಿತ್ರವಿರುವ 91 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರವೇ ಪ್ರಗತಿ ಸಾಧನೆಯಲ್ಲಿ ಮೊದಲ ಸ್ಥಾನದಲ್ಲಿದೆ. ಇದರ ಮಾಹಿತಿಯನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪರಿಶೀಲನೆ ನಡೆಸಬಹುದು ಎಂದು ತಿಳಿಸಿದರು.