ಯೋಗಾಭ್ಯಾಸದಿಂದ ಮಾನಸಿಕ ಸಮತೋಲನ

ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯ ಎಸ್.ವಿ.ಎಂ. ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಮಾಡಿದರು.
ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯ ಎಸ್.ವಿ.ಎಂ. ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಮಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸ್‌ವಿಎಂ ಇಂಟರ್ ನ್ಯಾಷನಲ್ ಸ್ಕೂಲ್ ನ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಅಭಿಪ್ರಾಯ
ಮದ್ದೂರು: ಯೋಗಾಭ್ಯಾಸವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಸಮತೋಲನವನ್ನು ಕಾಪಾಡುತ್ತದೆ. ಇದು ಕೇವಲ ವ್ಯಾಯಾಮವಲ್ಲ, ಬದಲಿಗೆ ಜೀವನಶೈಲಿಯಾಗಿದೆ ಎಂದು ಎಸ್‌ವಿಎಂ ಇಂಟರ್ ನ್ಯಾಷನಲ್ ಸ್ಕೂಲ್ ನ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ತಿಳಿಸಿದರು.
ತಾಲೂಕಿನ ಹೆಮ್ಮನಹಳ್ಳಿಯ ಎಸ್‌ವಿಎಂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ನಿಯಮಿತ ಯೋಗ ಅಭ್ಯಾಸವು ಒತ್ತಡವನ್ನು ಕಡಿಮೆ ಮಾಡುತ್ತದೆ. ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ಯೋಗವು ವ್ಯಕ್ತಿಯ ದೇಹ, ಮನಸ್ಸು ಮತ್ತು ಆತ್ಮದ ನಡುವಿನ ಸಂಬಂಧವನ್ನು ಬೆಸೆಯುತ್ತದೆ ಎಂದು ತಿಳಿಸಿದರು.
ಸಾವಿರಾರು ವರ್ಷಗಳ ಹಿಂದೆ ಭಾರತದಲ್ಲಿ ಹುಟ್ಟಿದ ಈ ಅದ್ಭುತ ಕಲೆಯು ಇಂದು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಜತೆಗೆ ಮಾನವನ ಜೀವನದಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದರು.
ಯೋಗಾಸನಗಳು ದೇಹದ ನಮ್ಯತೆಯನ್ನು ಹೆಚ್ಚಿಸುತ್ತವೆ. ಸ್ನಾಯುಗಳನ್ನು ಬಲಪಡಿಸುತ್ತವೆ. ರಕ್ತಸಂಚಾರವನ್ನು ಸುಧಾರಿಸುತ್ತವೆ. ಇದು ರಕ್ತದೊತ್ತಡ ಮತ್ತು ಮಧುಮೇಹದಂತಹ ಕಾಯಿಲೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಾನಸಿಕ ಶಾಂತಿಯನ್ನು ನೀಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ನಿರಂತರವಾಗಿ ಯೋಗಭ್ಯಾಸ ಮಾಡಿ ನೆಮ್ಮದಿ ಜೀವನ ನಡೆಸಬಹುದು ಎಂದರು.
ಯೋಗ ಗುರುಗಳಾದ ಚಿನ್ಮಯಿ, ವರುಣ್ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಯೋಗದ ಅಭ್ಯಾಸ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಆಸಕ್ತಿಯಿಂದ ಯೋಗದಲ್ಲಿ ಪಾಲ್ಗೊಂಡು ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.
ಸಂಸ್ಥೆಯ ಅಧ್ಯಕ್ಷೆ ರೂಪಾದೇವರಾಜು, ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ, ಸಹ ಶಿಕ್ಷಕರಾದ ರಶ್ಮಿತಾ, ವಿನೋದ್, ಶ್ರುತಿ, ಜಯವಾಣಿ, ನಿಶ್ಚಿತಾ, ರಂಜಿತಾ, ರಂಗನಾಥ್, ಮಮತಾ, ಕಾವ್ಯಾ, ನಾಗರತ್ನಾ, ಪ್ರೀತಿ, ಅನುಜ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net