ಗ್ಯಾಸ್ ದರ ಏರಿಕೆ ಬಗ್ಗೆ ಎಚ್‌ಡಿಕೆ ಮಾತನಾಡಲಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸವಾಲು

ಸಚಿವ ಎನ್.ಚಲುವರಾಯಸ್ವಾಮಿ
ಸಚಿವ ಎನ್.ಚಲುವರಾಯಸ್ವಾಮಿ
Published on

ಪ್ರಮುಖ ಮುಖ್ಯಾಂಶಗಳು

  • ಸಿಎಂ ಬದಲಾವಣೆ ಚರ್ಚೆ ವಿಚಾರ ಬೇಡ
  • ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ
ಮಂಡ್ಯ: ದೇಶದಲ್ಲಿ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದರ ಬಗ್ಗೆ ಗಮನಹರಿಸಬೇಕು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯಸರ್ಕಾರವನ್ನು ಕಟುವಾಗಿ ಟೀಕಿಸುತ್ತಾರೆ. ಪ್ರಹ್ಲಾದ್ ಜೋಶಿ ಹಾಗೂ ವಿ.ಸೋಮಣ್ಣ ಕೂಡ ವಾದ ಮಾಡುತ್ತಾರೆ. ಅದೇ ರೀತಿ ಗ್ಯಾಸ್ ದರ ಏರಿಕೆ ಬಗ್ಗೆಯೂ ಈ ಮೂವರು ಮಾತನಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಚರ್ಚೆ ವಿಚಾರ ಬೇಡ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಖರ್ಗೆ ಅವರೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ. ಬದಲಾವಣೆ ಮಾಡಬೇಕಾದರೆ ಅಲ್ಲಿಯೇ ತೀರ್ಮಾನ ಆಗುತ್ತದೆ. ಖರ್ಗೆ ಸಿಎಂ ಆಗ್ತಾರಾ?. ಸಿದ್ದರಾಮಯ್ಯ ಮುಂದುವರಿತ್ತಾರಾ?. ಇಲ್ಲ ಇನ್ನೊಬ್ಬರು ಆಗುತ್ತಾರಾ ಎನ್ನುವುದು ಮೂವರಿಗೆ ಬಿಟ್ಟ ವಿಚಾರ. ನಮ್ಮ ಮುಂದೆ ಬೇಕಾದಷ್ಟು ಸಮಸ್ಯೆ ಇದೆ, ಅದರ ಬಗ್ಗೆ ಮಾತನಾಡೋಣ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net