ಕಿಡಿಗೇಡಿಗಳಿಂದ ಕೈಗಾರಿಕಾ ತ್ಯಾಜ್ಯಕ್ಕೆ ಬೆಂಕಿ

ಮೊಗರಹಳ್ಳಿ(ಮಂಟಿ) ಬಳಿಯ ಹೊರವಲಯದಲ್ಲಿ ತಾಜ್ಯಕ್ಕೆ ಬೆಂಕಿ ಹಾಕಿರುವುದು.
ಮೊಗರಹಳ್ಳಿ(ಮಂಟಿ) ಬಳಿಯ ಹೊರವಲಯದಲ್ಲಿ ತಾಜ್ಯಕ್ಕೆ ಬೆಂಕಿ ಹಾಕಿರುವುದು.
Published on
ಕೆ.ಆರ್.ಸಾಗರ: ಮೊಗರಹಳ್ಳಿ (ಮಂಟಿ) ಹೊರಹೊಲಯದಲ್ಲಿರುವ ಕೈಗಾರಿಕಾ ಪ್ರದೇಶ ಸಮೀಪ ಅಪಾರ ಪ್ರಮಾಣದಲ್ಲಿ ಕೈಗಾರಿಕಾ ತ್ಯಾಜ್ಯ ಸುರಿಯುವುದರ ಜತೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ರಾತ್ರಿ ವೇಳೆ ತ್ಯಾಜ್ಯಕ್ಕೆ ಬೆಂಕಿ ಹಚ್ಚಲಾಗುತ್ತಿರುವುದರಿಂದ ದಟ್ಟವಾದ ವಿಷಕಾರಿ ಹೊಗೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಪ್ರದೇಶಗಳಿಗೆ ವ್ಯಾಪಿಸುತ್ತಿದೆ. ಪರಿಣಾಮ ಜನರು ಉಸಿರಾಟದ ತೊಂದರೆ, ಕಣ್ಣುರಿ, ಗಂಟಲು ಉರಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕೈಗಾರಿಕಾ ತ್ಯಾಜ್ಯ ದಹನದಿಂದ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಮಕ್ಕಳ ಹಾಗೂ ವಯೋವೃದ್ಧರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತ್ಯಾಜ್ಯ ಸುರಿದು ಬೆಂಕಿ ಹಚ್ಚುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪೋಟ:
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net