ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಟ್ನ ಬೇವುಕಲ್ಲು ಗ್ರಾಮದಲ್ಲಿ ಸಾಲಭಾದೆಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಟ್ನ ಬೇವುಕಲ್ಲು ಗ್ರಾಮದ ರೈತ ದಂಪತಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೃತರ ಮನೆಗೆ ಭೇಟಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಬಳಿಕ ಕುಟುಂಬಸ್ಥರೊಂದಿಗೆ ಮಾತನಾಡಿ ಅವರು, ರೈತ ಕುಟುಂಬವೊಂದು ಸಾಲದ ಸಮಸ್ಯೆಯಿಂದಾಗಿ ಇಂತಹ ದುಡುಕಿನ ನಿರ್ಧಾರ ಕೈಗೊಂಡಿರುವುದು ಅತ್ಯಂತ ನೋವಿನ ಸಂಗತಿ. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದರು.
ಇದೇ ವೇಳೆ ರೈತ ಸಮುದಾಯಕ್ಕೆ ಧೈರ್ಯ ತುಂಬಿದ ಅವರು, ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ದುಡುಕಿ ಆತ್ಮಹತ್ಯೆಯಂತಹ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎದುರಿಸೋಣ. ನಾವು ನಿಮ್ಮೊಂದಿಗಿದ್ದೇವೆ ಎಂದರು.