50 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ವಿನ್ಯಾಸ, ಕಟ್ಟಡಗಳ ಸ್ಥಳಾವಕಾಶ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯ ಹಾಗೂ ಭವಿಷ್ಯದಲ್ಲಿ ಮಿಮ್ಸ್ ವಿಸ್ತರಣೆಗೆ ಬೇಕಾಗುವ ಮೂಲಸೌಕರ್ಯಗಳ ಕುರಿತು ಸಮಗ್ರವಾಗಿ ಪರಿಶೀಲಿಸಿದ ಶಾಸಕ, ಮಿಮ್ಸ್ ಕೇವಲ ಮಂಡ್ಯ ಜಿಲ್ಲೆಗೆ ಸೀಮಿತವಾದ ವೈದ್ಯಕೀಯ ಸಂಸ್ಥೆಯಾಗದೆ ಸುತ್ತಮುತ್ತಲ ಜಿಲ್ಲೆಗಳ ಸಾವಿರಾರು ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದೆ. ಹೀಗಾಗಿ ಹೊಸ ಕಟ್ಟಡಗಳ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಯೋಜನೆಯ ಕಾಮಗಾರಿಯನ್ನು ಅನಗತ್ಯವಾಗಿ ವಿಳಂಬ ಮಾಡಬಾರದು. ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಟ್ಟಡಗಳ ವಿನ್ಯಾಸ ರೂಪಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಸಮಗ್ರ ನೀಲನಕ್ಷೆ ಸಿದ್ಧಪಡಿಸಿ, ಚರ್ಚೆಗೆ ಮಂಡಿಸಬೇಕು. ಯೋಜನೆ ಅನುಷ್ಠಾನಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ದೊರೆಯುವಂತೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.