ಮಳವಳ್ಳಿ : ರಸ್ತೆ ಸಾರಿಗೆ ಸಂಸ್ಥೆ ಚಾಲಕನೊಬ್ಬ ಮೊಬೈಲ್ ಫೋನ್ ವೀಕ್ಷಣೆ ಮಾಡಿಕೊಂಡು ಬಸ್ ಚಾಲನೆ ಮಾಡುತ್ತಿದ್ದ ಆರೋಪದ ಮೇಲೆ ಸೇವೆಯಿಂದ ಶನಿವಾರ ಅಮಾನತುಗೊಂಡಿದ್ದಾನೆ. .ಪಟ್ಟಣದ ಡಿಪೋದ ವಿ. ಮಹೇಶ್ ಶುಕ್ರವಾರ ಪ್ರಯಾಣಿಕರನ್ನು ತುಂಬಿಸಿಕೊಂಡು ಮೈಸೂರಿಗೆ ತೆರಳುತ್ತಿದ್ದರು. .ಈ ವೇಳೆ ರೀಲ್ಸ್ ನೋಡಿಕೊಂಡು ಚಾಲನೆ ಮಾಡುತ್ತಿದ್ದರು. ಇದನ್ನು ಪ್ರಯಾಣಿಕರೊಬ್ಬರು .ಮೊಬೈಲ್ ಫೋನಿನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು, ಚಾಲಕ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದರು. .ಈ ಹಿನ್ನೆಲೆಯಲ್ಲಿ ಮಂಡ್ಯ ವಿಭಾಗೀಯ ನಿಯಂತ್ರಣಾಧಿಕಾರಿ ಶರಣ ಬಸವರಾಜು ಅವರು .ಅಮಾನತು ಆದೇಶ ಹೊರಡಿಸಿದ್ದಾರೆ.