ನಗರಸಭೆ ಸೇರ್ಪಡೆಯಿಂದ ಹೆಚ್ಚಿನ ಸೌಕರ್ಯ

ಮದ್ದೂರು ನಗರದ ಗೊರವನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ಮಾಡಿದರು. ಚಲುವರಾಜು, ಮಮತಾ ಶಂಕರೇಗೌಡ, ಅಜ್ಜಹಳ್ಳಿ ರಾಮಕೃಷ್ಣ, ಹರೀಶ್‌ಬಾಬು, ರಾಘವ, ಎಂ.ಡಿ.ಮಹಾಲಿಂಗಯ್ಯ ಇದ್ದರು.
ಮದ್ದೂರು ನಗರದ ಗೊರವನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ಮಾಡಿದರು. ಚಲುವರಾಜು, ಮಮತಾ ಶಂಕರೇಗೌಡ, ಅಜ್ಜಹಳ್ಳಿ ರಾಮಕೃಷ್ಣ, ಹರೀಶ್‌ಬಾಬು, ರಾಘವ, ಎಂ.ಡಿ.ಮಹಾಲಿಂಗಯ್ಯ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗೊರವನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ
ಮದ್ದೂರು: ಗೆಜ್ಜಲಗೆರೆ, ಗೊರವನಹಳ್ಳಿ ಸೇರಿದಂತೆ ನಾಲ್ಕು ಗ್ರಾಮ ಪಂಚಾಯಿತಿಗಳ ಕೆಲವು ಗ್ರಾಮಗಳು ನಗರಸಭೆಗೆ ಸೇರ್ಪಡೆಯಾಗಿರುವುದರಿಂದ ಹೆಚ್ಚಿನ ಸೌಕರ್ಯಗಳು ಸಿಗಲಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶನಿವಾರ 8.15 ಕೋಟಿ ರೂ. ವೆಚ್ಚದಲ್ಲಿ ಬಿ.ಎನ್.ರಸ್ತೆಯಿಂದ ಮರಕಾಡುದೊಡ್ಡಿ, ಗೊರವನಹಳ್ಳಿ ಮುಖಾಂತರ ಮದ್ದೂರು ಕ್ರೀಡಾಂಗಣ ಬಳಿ ಪೇಟೆಬೀದಿ ಸೇರಿರುವ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಗೋಸ್ಕರ 4 ಗ್ರಾಪಂಗಳನ್ನು ನಗರಸಭೆಗೆ ಸೇರಿಸಲಾಗಿದೆ. ಇದರಲ್ಲಿ ನನ್ನ ವೈಯಕ್ತಿಕ ಹಿತಾ ಶಕ್ತಿ ಏನೂ ಇಲ್ಲ ಎಂಬುವುದನ್ನು ಸ್ಥಳಿಯ ಗ್ರಾಮಸ್ಥರುಗಳು ಅರ್ಥಮಾಡಿಕೊಳ್ಳಬೇಕು ಎಂದ ಅವರು ಕೆಲವರು ಮಾಡುತ್ತಿರುವ ರಾಜಕೀಯ ದುರುದ್ದೇಶಗಳಿಂದ ಕೆಲವು ಮುಗ್ದ ಜನಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ಅಂತವರ ಮಾತುಗಳಿಗೆ ಕಿವಿಗೊಡಬಾರದು ಎಂದರು.
8 ರಿಂದ 10 ಬಾರಿ ಶಾಸಕರಾಗಿರುವವರ ಕ್ಷೇತ್ರಗಳಿಗೂ ರಾಜ್ಯ ಸರ್ಕಾರ ಇಷ್ಟೊಂದು ಅನುದಾನ ನೀಡಿಲ್ಲ. ಆದರೆ ಮದ್ದೂರು ಕ್ಷೇತ್ರದ ಅಭಿವೃದ್ಧಿಗಾಗಿ ನನ್ನ ಮನವಿ ಹಾಗೂ ಶ್ರಮದಿಂದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಅವರ ಕ್ಷೇತ್ರಗಳಿಗೆ ನೀಡಿದ್ದಂತೆ ಹೆಚ್ಚಿನ ಅನುದಾನಗಳನ್ನು ನೀಡುತ್ತಿರುವುದರಿಂದಾಗಿ ಕೇವಲ ಎರಡೂವರೆ ವರ್ಷಗಳಲ್ಲಿ 1,900 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ತಂದು ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು.
ನನಗೆ ಅಧಿಕಾರ ಮುಖ್ಯವಲ್ಲ. ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದಷ್ಟೆ ನನ್ನ ಗುರಿಯಾಗಿದ್ದು, ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡುತ್ತೇನೆ ಎಂದ ಅವರು, ಗೊರವನಹಳ್ಳಿ ನಗರಸಭೆಗೆ ಸೇರ್ಪಡೆಯಾಗಿರುವುದರಿಂದ ಗ್ರಾಮದ ಹಾಲಿನ ಡೇರಿಯಾಗಲಿ, ರೈತರ ಸೊಸೈಟಿಯಾಗಲಿ ಗ್ರಾಮದಿಂದ ಬೇರೆ ಎಲ್ಲಿಗೂ ಸ್ಥಳಾಂತರವಾಗುವುದಿಲ್ಲ ಎಂದರು.
ಮುಂದಿನ ದಿನಗಳಲ್ಲಿ ಗೊರವನಹಳ್ಳಿಯ ಅಭಿವೃದ್ಧಿಗೆ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುವುದು. ಅಷ್ಟೇ ಅಲ್ಲದೆ ನಗರಸಭೆಯಲ್ಲಿ ಗ್ರಾಮಸ್ಥರು ತಮ್ಮ ಆಸ್ತಿ ಬಗೆಗಿನ ಇ-ಖಾತಾ ಸೌಕರ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಹಿಂದೆ ಗ್ರಾಮಸ್ಥರು ಕಟ್ಟುತ್ತಿದ್ದ ಆಸ್ತಿ ಕಂದಾಯವನ್ನಷ್ಟೆ ಕಟ್ಟಬೇಕೇ ಹೊರತು ಅದಕ್ಕೂ ಹೆಚ್ಚಿನ ಕಂದಾಯ ಕಟ್ಟುವಂತಿಲ್ಲ ಎಂದು ತಿಳಿಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ತಾಲೂಕು ಬ್ಲಾಕ್ ಮಹಿಳಾ ಅಧ್ಯಕ್ಷೆ ಮಮತಾ ಶಂಕರೇಗೌಡ, ನಗರಸಭೆ ಪೌರಾಯುಕ್ತೆ ರಾಧಿಕಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ಎಂ.ಡಿ.ಮಹಾಲಿಂಗಯ್ಯ, ಮೋಹನ್‌ಕುಮಾರ್, ರಾಘವ್, ಮಧು, ಶಿವರಾಮು, ಪುಟ್ಟಸ್ವಾಮಿ, ಬೋರೇಗೌಡ, ಶಿವರಾಮು, ಎಂ.ಡಿ.ಮಹಾಲಿಂಗಯ್ಯ, ಜವರೇಗೌಡ, ಶಿವಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net