ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋಟ್ಯಂತರ ರೂ ಅನುದಾನವನ್ನು ಕಾರ್ಖಾನೆಗೆ ನೀಡಿದೆ. 2023-24ನೇ ಸಾಲಿನಲ್ಲಿ 50 ಕೋಟಿ ರೂ ಅನುದಾನ, ಬಳಿಕ 52 ಕೋಟಿ ರೂ ವಿದ್ಯುತ್ ಬಿಲ್ ಮನ್ನಾ, 2025-26ನೇ ಸಾಲಿನಲ್ಲಿ 10 ಕೋಟಿ ರೂ ಅನುದಾನ ನೀಡಲಾಗಿದೆ. ಇದಲ್ಲದೆ ಕಾರ್ಖಾನೆಗೆ ಸೇರಿದ 27 ಎಕರೆ ಜಮೀನನ್ನು ತಮ್ಮ ವಶಕ್ಕೆ ಪಡೆಯಲಾಗಿದೆ. ಈವರೆಗೆ ಕಾರ್ಖಾನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿದ್ದು, ಮುಂದೆಯೂ ಅದನ್ನೇ ಮುಂದುವರೆಸಿಕೊಂಡು ಹೋಗಲಾಗುವುದು. ಮುಂದಿನ ಹಂಗಾಮಿಗೆ ಸಂಬಂಧಿಸಿದಂತೆ ಕಬ್ಬು ಅರೆಯಲು ರೈತರಿಂದ ಒಪ್ಪಿಗೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ಶೀಘ್ರವೇ ಬಾಯ್ಲರ್ ಹೌಸ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.