ಕಾರ್ಖಾನೆಯ ಯಶಸ್ಸಿನ ಬಗ್ಗೆ ಕೆಲ ದಿನದ ಹಿಂದೆ ರೈತ ಪ್ರತಿನಿಧಿಗಳ ಸಭೆ ನಡೆಸಿ ಪೂರ್ಣ ಮಾಹಿತಿ ನೀಡಲಾಗಿದೆ. ಆ ಸಭೆಯಲ್ಲಿ ರೈತ ಹಿತರಕ್ಷಣಾ ಸಮಿತಿ ಮುಖಂಡರು, ಕಬ್ಬು ಒಪ್ಪಿಗೆದಾರರ ಸಂಘದ ಅಧ್ಯಕ್ಷರು, ಮುಖಂಡರು ಮಾತ್ರವಲ್ಲದೆ ಹಲವು ಪ್ರಗತಿಪರ ಮುಖಂಡರು ಸಹ ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆಗಳನ್ನು ನೀಡಿದ್ದಾರೆ. ಜತೆಗೆ ಕಾರ್ಖಾನೆಯ ಎರಡು ವರ್ಷದ ಆಗು-ಹೋಗುಗಳ ಬಗ್ಗೆ ಸುರ್ದೀಘವಾಗಿ ಚರ್ಚೆ ಮಾಡಲಾಗಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಕೆಲವರು, ಮೈಶುಗರ್ ಅಭಿವೃದ್ಧಿಯನ್ನು ಸಹಿಸದೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.