ಚೆಲುವನಾರಾಯಣಸ್ವಾಮಿ ದರ್ಶನ ಪಡೆದ ನಾಗಲಕ್ಷ್ಮಿ ಚೌಧರಿ

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದರ್ಶನ ಪಡೆದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿಚೌಧರಿ ದೇವಾಲಯದ ರಾಜಗೋಪುರದ ಬಳಿ ಸ್ಥಳೀಯ ಮಹಿಳೆಯರಿಂದ ಮನವಿ ಸ್ವೀಕರಿಸಿದರು.
ಮೇಲುಕೋಟೆ ಚೆಲುವನಾರಾಯಣಸ್ವಾಮಿ ದರ್ಶನ ಪಡೆದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿಚೌಧರಿ ದೇವಾಲಯದ ರಾಜಗೋಪುರದ ಬಳಿ ಸ್ಥಳೀಯ ಮಹಿಳೆಯರಿಂದ ಮನವಿ ಸ್ವೀಕರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • Nagalakshmi Chowdhury
ಮೇಲುಕೋಟೆ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭಾನುವಾರ ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣಸ್ವಾಮಿ ದರ್ಶನ ಪಡೆದರು. ಇದೇ ವೇಳೆ ಯತಿರಾಜದಾಸರ ಗುರುಪೀಠಕ್ಕೂ ಭೇಟಿ ನೀಡಿದ ಅವರು, ದೇವಾಲಯದ ಪಾರುಪತ್ತೇಗಾರ್ ಮತ್ತು ಸ್ಥಾನಾಚಾರ್ಯ ಶ್ರೀನಿವಾಸನರಸಿಂಹನ್ ಗುರೂಜಿಯ ಆಶೀರ್ವಾದ ಪಡೆದರು.
ನಂತರ ಇಲ್ಲಿನ ಶತಮಾನದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಸ್ಥಳೀಯ ಸಲ್ಲಿಸಿದ ಮನವಿಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಗೋವಿಂದೇಗೌಡ, ಪಾಂಡವಪುರ ತಹಸೀಲ್ದಾರ್ ಆದರ್ಶ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕನಗೋನಹಳ್ಳಿ ಪರಮೇಶ್‌ಗೌಡ, ಸದಸ್ಯರಾದ ಪುಟ್ಟಸ್ವಾಮಿಗೌಡ, ಬಚ್ಚಿಕೊಪ್ಪಲು ರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net