ತಾಲೂಕಿನ ಸುಂಡಹಳ್ಳಿಯಲ್ಲಿರುವ ಸಿಐಟಿ ಕಾಲೇಜಿನಲ್ಲಿ ರ‌್ಯಾಂಕ್‌ಬುಕ್ ಲನಿರ್ಂಗ್ ಆ್ಯಂಡ್ ಸಾಫ್ಟ್‌ವೇರ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಪ್ರಾಯೋಗಿಕ ತಾಂತ್ರಿಕ ಸ್ಪರ್ಧೆಗೆ(ಹ್ಯಾಕಥಾನ್) ಚಾಲನೆ ನೀಡಿ ಮಾತನಾಡಿದ ಅವರು, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಈ ಸ್ಪರ್ಧೆಗೆ 50 ರಿಂದ 60 ತಂಡ ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ, ನಮ್ಮ ನಿರೀಕ್ಷೆಗೂ ಮೀರಿ 102 ತಂಡಗಳ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ರಾಜ್ಯದ ಉತ್ತರ ಭಾಗದ ಹುಬ್ಬಳ್ಳಿ, ಧಾರವಾಡ, ದಾವಣಗೆರೆ ಸೇರಿದಂತೆ ನೆರೆಯ ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದಿಂದಲೂ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ’ಫುಲ್ ಸ್ಟಾಕ್ ಡೆವಲಪ್ಮೆಂಟ್’, ’ಸೈಬರ್ ಸೆಕ್ಯುರಿಟಿ’ ಹಾಗೂ ಪ್ರಸ್ತುತ ಬೇಡಿಕೆಯಲ್ಲಿರುವ ’ಎಐ’ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಸಾಫ್ಟ್‌ವೇರ್ ಅಭಿವೃದ್ಧಿಪಡಿಸುವ ಮೂಲಕ ತಮ್ಮ ಆವಿಷ್ಕಾರವನ್ನು ಮಂಡಿಸುತ್ತಿದ್ದಾರೆ ಎಂದರು.