ನಗರದ ಆರ್‌ಟಿಒ ಕಚೇರಿ ಆವರಣದಲ್ಲಿ ರಸ್ತೆ ಸುರಕ್ಷತಾ ಸಮಿತಿ, ಮಂಡ್ಯ ಪ್ರಾದೇಶಿಕ ಸಾರಿಗೆ ಕಚೇರಿ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ, ಮಿಮ್ಸ್ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆ ಸುರಕ್ಷತೆ ಮಾಸಾಚರಣೆ ಅಂಗವಾಗಿ ಆರ್‌ಟಿಒ ಕಚೇರಿಗೆ ಬರುವ ಚಾಲಕರು ಮತ್ತು ಮಾಲೀಕರು, ಡಿಎಲ್ ಅಭ್ಯರ್ಥಿಗಳು, ಸಾರ್ವಜನಿಕರು ರಕ್ತದಾನ ಮಾಡಿ. ಅಪಘಾತದ ಸಂದರ್ಭದಲ್ಲಿ ರಕ್ತ ಬೇಕಾಗುತ್ತದೆ. ಆದ್ದರಿಂದ ರಕ್ತದಾನ ಮಾಡುವುದರಿಂದ ಪ್ರಾಣಾಪಾಯದಲ್ಲಿರುವ ವ್ಯಕ್ತಿಗೆ ಅನುಕೂಲವಾಗುತ್ತದೆ ಎಂದರು.