ತಪ್ಪಿತಸ್ಥರ ವಿರುದ್ಧ ಕ್ರಮ: ನಾಗಮಂಗಲ ತಾಲೂಕು ವ್ಯಾಪ್ತಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.ಸಭೆಯಲ್ಲಿ ಶಾಸಕರಾದ ಕೆ.ಎಂ.ಉದಯ, ಜಿಲ್ಲಾಧಿಕಾರಿ ಕುಮಾರ, ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ತಹಸೀಲ್ದಾರ್ ಪರುಶರಾಮ್ ಸತ್ತಿಗೇರಿ, ಸೇರಿದಂತೆ ಗ್ರಾಮಸ್ಥರು ಇದ್ದರು.