2019ರಲ್ಲಿ ಒಬ್ಬ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಯಾರ‌್ಯಾರು ಸಂಚು ರೂಪಿಸಿದ್ದರು. ನನ್ನ ಚುನಾವಣೆಯ ಸೋಲಿನ ಮೇಲೆ ನನ್ನ ರಾಜಕಾರಣದ ನಾಯತ್ವ ಸೃಷ್ಟಿ ಆಗುತ್ತೋ, ಆಗಲ್ವೋ ಅನ್ನೋದು ನಿರ್ಣಯ ಆಗಲ್ಲ ಎಂದು ತಿರುಗೇಟು ನೀಡಿದ ನಿಖಿಲ್, ರಾಮನಗರ ಕುಮಾರಣ್ಣ ಮತ್ತು ದೇವೇಗೌಡರ ಮರುಸೃಷ್ಟಿ ಮಾಡಿರುವ ಪುಣ್ಯಭೂಮಿ. ಕಳೆದ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿದ್ದೆ. ನನ್ನ ನಂಬಿರುವ ಕಾರ್ಯಕರ್ತರು, ಮುಖಂಡರ ವರ್ಗ ಇದೆ. ಪಲಾಯನ ಮಾಡಿ ಮಧ್ಯದಲ್ಲಿ ಹೋಗುವ ವ್ಯಕ್ತಿತ್ವ ನನ್ನದಲ್ಲ. ಮಂಡ್ಯ ಜಿಲ್ಲೆ ನಮ್ಮದೆ. ನಮ್ಮನ್ನ ಪ್ರೀತಿಸುವ ನಾಡು. ನಮ್ಮ ಕಾರ್ಯಕರ್ತರು ಎಲ್ಲಿ ಬೆಳೆಸಿದ್ದಾರೋ ಅದನ್ನ ಅರಿತು ಹೆಜ್ಜೆ ಹಾಕುವ ಜವಾಬ್ದಾರಿ ಇದೆ, ಸಮಯ ಬಂದಾಗ ಎಲ್ಲ ಗೊತ್ತಾಗುತ್ತೆ ಎಂದು ಹೇಳಿದರು.