ನಾಗಮಂಗಲ ಹಳ್ಳಿಕೆರೆ ಗ್ರಾಮದ ಸೋಮೇಶ್ (35) ಮೃತ. ಇಲ್ಲಿನ ಮೈಸೂರು-ಜೀವರ್ಗಿ ಹೆದ್ದಾರಿಯ ಬೆಳ್ಳಾಳೆ ಬಳಿ ಶನಿವಾರ ನಾಗಮಂಗಲದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ನಿಂದ ಕೆಳಗೆ ಬಿದ್ದ ಯುವಕನ ತಲೆಗೆ ಗಾಯಗೊಂಡು ತೀವ್ರ ರಕ್ತ ಸ್ರಾವದಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಮೈಸೂರು ಖಾಸಗಿ ಆಸ್ವತ್ರೆಗೆ ದಾಖಲು ಮಾಡಲಾಗಿದೆ.