ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಿದರು. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಯಶವಂತ್ ಕುಮಾರ್, ಇನ್‌ಸ್ಪೆಕ್ಟರ್ ಬಸವರಾಜು ಹಾಗೂ ಸಿಬ್ಬಂದಿ ಇದ್ದರು.