ತಾಲೂಕಿನ ಮಂಗಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಸಹಯೋಗದಲ್ಲಿ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಿದ್ದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಸಹಾಯ ಸಂಘಗಳಿಗೆ ಬ್ಯಾಂಕ್ ನೇರ ಸಾಲ ನೀಡಲಾಗುತ್ತಿದೆ. ಸಂಘಗಳ ಉಳಿತಾಯದ ನಾಲ್ಕು ಪಟ್ಟು ಹಾಗೂ ಅದಕ್ಕಿಂತ ಹೆಚ್ಚು ಮೊತ್ತದ ಸಾಲವನ್ನು ಜಾಮೀನು ರಹಿತವಾಗಿ ನೀಡಲಾಗುತ್ತಿದೆ. ಈ ಸಾಲದ ಹಣವನ್ನು ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆಗೆ ಬಳಸಿ ಜೀವನಮಟ್ಟ ಸುಧಾರಿಸಿಕೊಳ್ಳಲು ಕರೆ ನೀಡಿದರು.