ಬಿಜೆಪಿ ರೈತ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್ ಮಾತನಾಡಿ, ಪ್ರಾಧಿಕಾರ ನೀಡಿರುವ ಆದೇಶವನ್ನು ವಿರೋಧಿಸುವ ಮೂಲಕ ರಾಜ್ಯ ಸರ್ಕಾರ ರೈತರ ಪರವಾಗಿ ನಾವಿದ್ದೇವೆ ಎಂಬುದನ್ನು ನಿರೂಪಿಸಬೇಕು. ನಮ್ಮ ಜಲಾಶಯಗಳಲ್ಲಿ ನೀರಿನ ಲಭ್ಯತೆ ಇದ್ದರೆ ತಮಿಳುನಾಡಿಗೆ ಬಿಡುವುದು ಸಹಜ ಪ್ರಕ್ರಿಯೆ. ವಾಸ್ತವದಲ್ಲಿ ನಮ್ಮ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಇಂತಹ ಸಂಧಿಗ್ಧತೆಯಲ್ಲಿ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶಿಸಿರುವ ಪ್ರಾಧಿಕಾರದ ನಿಲುವು ಅವೈಜ್ಞಾನಿಕವಾಗಿದೆ. ಈ ಹಿಂದೆ 3.5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ನೀಡಿದ್ದ ಆದೇಶವನ್ನೇ ನಾವು ಒಪ್ಪಿರಲಿಲ್ಲ. ಈಗ 12 ಸಾವಿರ ಕ್ಯೂಸೆಕ್ ನೀರು ಬಿಡಲು ಒಪ್ಪುತ್ತೇವೆಯೇ. ಆದೇಶದಂತೆ ತಮಿಳುನಾಡಿಗೆ ನೀರು ಹರಿದರೆ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಒಂದು ತೊಟ್ಟು ನೀರು ಉಳಿಯುವುದಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಾವು ಬೆಂಬಲ ಕೊಡುತ್ತೇವೆ. ಮುಖ್ಯಮಂತ್ರಿ ಪ್ರಾಧಿಕಾರದ ಆದೇಶವನ್ನು ವಿರೋಧಿಸಿ ರೈತರ ಪರವಗಿ ನಿಲ್ಲಲಿ ಎಂದರು.