ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ ಇಂದು

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ವಿಜಯಲಕ್ಷ್ಮೀ ದೇಶಮಾನೆ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ವಿಜಯಲಕ್ಷ್ಮೀ ದೇಶಮಾನೆ
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀಮತಿ ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನ
  • ಮಾ.24 ರಂದು 12ನೇ ವರ್ಷದ ಶ್ರೀಮತಿ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕೆ.ಎಂ.ದೊಡ್ಡಿ: ಶ್ರೀಮತಿ ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನ ವತಿಯಿಂದ ಮಾ.24 ರಂದು 12ನೇ ವರ್ಷದ ಶ್ರೀಮತಿ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ತಿಳಿಸಿದರು.
ಪದ್ಮ ಜಿ.ಮಾದೇಗೌಡ ಅವರ ಹೆಸರಿನಲ್ಲಿ ಕಳೆದ 11 ವರ್ಷಗಳಿಂದ ಮಹಿಳಾ ಸಾಧಕಿಯರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಂದು ಬೆಳಗ್ಗೆ 10.30ಕ್ಕೆ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯ ಮಟ್ಟದಲ್ಲಿ ಸೇವೆ ಸಲ್ಲಿಸಿದ 11 ಸಾಧಕಿಯರನ್ನು ಗುರುತಿಸಿ ಪ್ರತಿಷ್ಠಾನ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಅದೇ ರೀತಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರನ್ನೂ ಅಭಿನಂದಿಸಲಾಗುವುದು. ಖ್ಯಾತ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರು ಕಲಬುರಗಿಯಂತಹ ಜವಾರಿ ಮಣ್ಣಿನಲ್ಲಿ ಅರಳಿದ ಪ್ರತಿಭೆ. ಕಡು ಬಡತನದಲ್ಲಿ ಹುಟ್ಟಿ ಬಳ್ಳಾರಿಯ ಮಹಿಳಾ ಕಾಲೇಜಿನಲ್ಲಿ ಜನರಲ್ ಸರ್ಜರಿಯ ಎಂಎಸ್ ಪೂರ್ಣಗೊಳಿಸಿ ಅದೇ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆ ತಜ್ಞೆ ಎಂದು ಹೆಸರು ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ ಎಂದರು.
ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ವಹಿಸಲಿದ್ದಾರೆ. ಪದ್ಮಾ ಜಿ.ಮಾದೇಗೌಡ, ಭಾರತೀ ಎಜುಕೇಷನ್ ಟ್ರಸ್ಟ್ ಚೇರ‌್ಮನ್ ಮಧು ಜಿ.ಮಾದೇಗೌಡ, ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು ಮಾದೇಗೌಡ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.
ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ಅಂಗ ಸಂಸ್ಥೆಯ ಮಹಿಳಾ ಶಿಕ್ಷಕಯರಿಂದ ವಿವಿಧ ಸಾಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಭಾರತೀ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಮಹದೇವಸ್ವಾಮಿ, ಕಾರ್ಯಕ್ರಮದ ಸಂಚಾಲಕಿ ಮಮತಾ ನಾಗ್, ಪ್ರತಿಮಾ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net