ಗ್ರಾಮಗಳ ಸೇರ್ಪಡೆ ಖಂಡಿಸಿ ಪಂಜಿನ ಮೆರವಣಿಗೆ

ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಮದ್ದೂರು ನಗರದಲ್ಲಿ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.
ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಮದ್ದೂರು ನಗರದಲ್ಲಿ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • Panji procession by local villagers
ಮದ್ದೂರು : ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ಮದ್ದೂರು ನಗರದಲ್ಲಿ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.
ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಸೇರಿಸಿರುವುದನ್ನು ವಿರೋಧಿಸಿ ಗೆಜ್ಜಲಗೆರೆ ಗ್ರಾಪಂ ಆವರಣದಲ್ಲಿ 53 ದಿನಗಳಿಂದ ಹಾಗೂ ಗೊರವನಹಳ್ಳಿ ಗ್ರಾಪಂ ಅನ್ನು ನಗರ ಸಭೆಗೆ ಸೇರಿಸಿರುವುದನ್ನು ಖಂಡಿಸಿ ಗ್ರಾಪಂ ಕಚೇರಿ ಎದುರು 34 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ನಗರದ ಶಿವಪುರ ಸತ್ಯಾಗ್ರಹ ಸೌಧದಿಂದ ಆರಂಭಗೊಂಡ ಪಂಜಿನ ಮೆರವಣಿಗೆಗೆ ರೈತ ನಾಯಕಿ ಸುನಂದಾ ಜಯರಾಮು ಚಾಲನೆ ನೀಡಿದರು. ಬಳಿಕ ಮಾತನಾಡಿ, ಮದ್ದೂರು ನಗರಸಭೆಗೆ ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಗ್ರಾಪಂಗಳನ್ನು ಸೇರಿಸಿರುವುದು ಸರಿಯಲ್ಲ. ಈ ಕೂಡಲೇ ಈ ಪಂಚಾಯಿತಿಗಳನ್ನು ನಗರಸಭೆಯಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಹಲವು ದಿನಗಳಿಂದ 2 ಪಂಚಾಯಿತಿಗಳ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಯುತ್ತಿದ್ದರು ಸ್ಥಳಕ್ಕೆ ಶಾಸಕರು, ಸಚಿವರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಬಾರದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
4 ಗ್ರಾಪಂಗಳನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವವರೆಗೆ ಹೋರಾಟ ನಿರಂತರವಾಗಿ ನಡೆಯುತ್ತದೆ. ನಂತರ ಪಂಜಿನ ಮೆರವಣಿಗೆ ಸತ್ಯಾಗ್ರಹ ಸೌಧದಿಂದ ನಗರದ ಪೇಟೆ ಬೀದಿಯ ಮುಖಾಂತರ ನೂರಾರು ಮಂದಿ ನಗರಸಭೆ ವಿರೋಧಿಸಿ ಬೇಕೆ ಬೇಕು ಪಂಚಾಯಿತಿ ಬೇಕು ಎಂದು ಘೋಷಣೆಗಳನ್ನು ಕೂಗುತ್ತಾ ಪ್ರವಾಸಿ ಮಂದಿರ ಬಳಿ ಆಗಮಿಸಿದರು.
ಲಿಂಗಪ್ಪಾಜಿ, ಶಂಕರ್, ರಾಧಾ, ಚಂದ್ರಶೇಖರ್, ವೀರಪ್ಪ, ಮೋಹನ್, ಜಿ.ಪಿ.ಯೋಗೇಶ್, ಶಿವಕುಮಾರ್, ಸತ್ಯಮ್ಮ, ಪ್ರಸನ್ನ, ಉಮೇಶ್, ಅವಿನಾಶ್, ಮಹೇಶ್, ಲಿಂಗಯ್ಯ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net