ಅದ್ದೂರಿ ಸ್ವಾಗತ::ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಹೂ ನೀಡಿ, ಸಿಹಿ ಹಂಚಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ವಿವಿಧ ತಳಿತೋರಣ, ಹೂಗಳಿಂದ ಶಾಲೆಯನ್ನು ಅಲಂಕರಿಸಲಾಗಿತ್ತು. ಬಿಇಒ ಶ್ರೀಧರ್ಮಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್.ಪ್ರಕಾಶ್ ಹಾಗೂ ಹಲವು ಶಾಲೆಗಳಿಗೆ ಭೇಟಿ ನೀಡಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.