ಒತ್ತಡ ನಿವಾರಣೆಗೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಿ

 ಕೆ.ಆರ್.ಸಾಗರ ಯೋಜನೆ ಶಾಖೆಯ ಸರ್ಕಾರಿ ನೌಕರರ ಸಂಘದ ವತಿಯಿಂದ ಗ್ರಾಮದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸೌಹಾರ್ದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಕೆ.ಆರ್.ಸಾಗರದ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ನಿರ್ದೇಶಕ  ಕೆ.ಜೆ.ಮಹೇಶ್ ಚಾಲನೆ ನೀಡಿದರು. ಜಯಪ್ರಕಾಶ, ಜಶ್ವಂತ್ ಇತರರು ಇದ್ದರು.

Published on
ಕೆ.ಆರ್.ಸಾಗರ: ಸರ್ಕಾರಿ ನೌಕರರು ತಮ್ಮ ರಜಾ ಸಂದರ್ಭದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಎಂದು ಕೆ.ಆರ್.ಸಾಗರದ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ನಿರ್ದೇಶಕ ಕೆ.ಜೆ.ಮಹೇಶ್ ಹೇಳಿದರು.
ಗಣರಾಜ್ಯೋತ್ಸವದ ಅಂಗವಾಗಿ ಕೆ.ಆರ್.ಸಾಗರ ಯೋಜನೆ ಶಾಖೆಯ ಸರ್ಕಾರಿ ನೌಕರರ ಸಂಘದ ವತಿಯಿಂದ ಗ್ರಾಮದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸೌಹಾರ್ದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ದಿನನಿತ್ಯದ ಒತ್ತಡ ನಡುವೆ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಕೊಂಚ ನೆಮ್ಮದಿ ಸಿಗುತ್ತದೆ. ಕ್ರೀಡೆಯಲ್ಲಿ ಸೋಲು ಹಾಗೂ ಗೆಲುವನ್ನು ಸಮನಾಗಿ ಸ್ವೀಕರಿಸಿ ಎಂದು ಸಲಹೆ ನೀಡಿದರು.
ಕೆ.ಆರ್.ಸಾಗರ ಯೋಜನಾ ಶಾಖೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಪ್ಪ ಮುಖ್ಯ ಅತಿಥಿಗಳಿಗೆ ಆಟಗಾರರನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಜಯಪ್ರಕಾಶ, ಖಜಾಂಚಿ ಜಶ್ವಂತ್, ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.
ಕಾವೇರಿ ನೀರಾವರಿ ನಿಗಮ, ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ಮತ್ತು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ತಂಡಗಳು ಭಾಗವಹಿಸಿದ್ದವು. ಕಾವೇರಿ ನೀರಾವರಿ ನಿಗಮ ಮತ್ತು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ತಂಡಗಳು ಫೈನಲ್ ಪ್ರವೇಶಿಸಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net