ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿದೆ

ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಎನ್.ಎಂ.ಪ್ರಕಾಶ್ ನೇತೃತ್ವದಲ್ಲಿ ಹೊಟ್ಟೆಗೌಡನದೊಡ್ಡಿ ಗ್ರಾಮದ ಜೆಡಿಎಸ್ ಪಕ್ಷದ ಹಲವಾರು ಮುಖಂಡರನ್ನು ಶಾಸಕ ಕೆ.ಎಂ.ಉದಯ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಸುರೇಶ್, ನಾಗರಾಜು, ರಮೇಶ್, ಮನುಕುಮಾರ್, ಅನಿಲ್, ಪುಟ್ಟಸ್ವಾಮಿ, ಪುಟ್ಟಯ್ಯ, ಕೃಷ್ಣ, ನಾಗರಾಜು, ಶಿವಣ್ಣ, ಉಮೇಶ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ. ಉದಯ್ ಅಭಿಪ್ರಾಯ
ಮದ್ದೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ಅನ್ಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಕದಲೂರು ಗ್ರಾಮದಲ್ಲಿ ಭಾನುವಾರ ಗ್ರಾ.ಪಂ. ಮಾಜಿ ಅಧ್ಯಕ್ಷ ಎನ್.ಎಂ.ಪ್ರಕಾಶ್ ನೇತೃತ್ವದಲ್ಲಿ ಹೊಟ್ಟೆಗೌಡನದೊಡ್ಡಿ ಗ್ರಾಮದ ಜೆಡಿಎಸ್ ಪಕ್ಷದ ಹಲವಾರು ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.
ಕಾಂಗ್ರೆಸ್ ಪಕ್ಷ ನಿರಂತರವಾಗಿ ಜನಪರ ಯೋಜನೆಗಳನ್ನು ರೂಪಿಸುತ್ತಾ ಎಲ್ಲ್ಲ ವರ್ಗದ ಜನರಿಗೂ ಅನುಕೂಲ ಕಲ್ಪಿಸಿ ಜನರ ವಿಶ್ವಾಸಗಳಿಸಿದೆ. ಇದರಿಂದ ರಾಜ್ಯದ ಜನರಿಗೆ ಕಾಂಗ್ರೆಸ್ ಪಕ್ಷದ ಮೇಲಿನ ವಿಶ್ವಾಸ ಇಮ್ಮಡಿಗೊಂಡಿದೆ ಎಂದರು.
ಕ್ಷೇತ್ರದಲ್ಲಿ ಶಾಸಕನಾದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರದಿಂದ 2 ಸಾವಿರ ಕೋಟಿ ರೂ.,ಗೂ ಅಧಿಕ ಅನುದಾನ ತಂದು ಕುಡಿಯುವ ನೀರು, ರಸ್ತೆ, ಚರಂಡಿ, ನೀರಾವರಿ, ಶಿಕ್ಷಣ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಇತರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ಹೊಟ್ಟೆಗೌಡನದೊಡ್ಡಿ ಗ್ರಾಮದ ಸುರೇಶ್, ನಾಗರಾಜು, ರಮೇಶ್, ಮನುಕುಮಾರ್, ಅನಿಲ್, ಪುಟ್ಟಸ್ವಾಮಿ, ಪುಟ್ಟಯ್ಯ, ಕೃಷ್ಣ, ನಾಗರಾಜು, ಶಿವಣ್ಣ, ಉಮೇಶ್, ಸಿದ್ದರಾಮು, ವಿಷಕಂಠ, ರಾಜಣ್ಣ ಸೇರಿದಂತೆ ಹಲವಾರು ಮಂದಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net