ಗ್ಯಾಸ್ ಸಿಲಿಂಡರ್‌ಗಾಗಿ ಕಾದುನಿಂತ ಜನರು

ಹಲಗೂರಿನಲ್ಲಿ ಗ್ಯಾಸ್ ಸಿಲೆಂಡರ್ ಗಾಗಿ ಕಾದು ನಿಂತ ಗ್ರಾಹಕರು.
ಹಲಗೂರಿನಲ್ಲಿ ಗ್ಯಾಸ್ ಸಿಲೆಂಡರ್ ಗಾಗಿ ಕಾದು ನಿಂತ ಗ್ರಾಹಕರು.
Published on

ಪ್ರಮುಖ ಮುಖ್ಯಾಂಶಗಳು

  • ಇರಾನ್ ಹಾಗೂ ಇಸ್ರೇಲ್ ಯುದ್ಧದ ಬಿಸಿ
ಹಲಗೂರು: ಇರಾನ್ ಹಾಗೂ ಇಸ್ರೇಲ್ ಯುದ್ಧದಿಂದ ಉಂಟಾಗಿರುವ ಗ್ಯಾಸ್ ಸಿಲಿಂಡರ್ ಅಭಾವದ ಬಿಸಿ ಹಲಗೂರಿಗೂ ತಟ್ಟಿದೆ. ಗೃಹ ಬಳಕೆ ಅನಿಲ ಸಿಲಿಂಡರ್‌ಗಾಗಿ ಸಾರ್ವಜನಿಕರು ಏಜೆನ್ಸಿಗಳ ಮುಂದೆ ಕಾದು ನಿಲ್ಲುವಂತಹ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರಿಂದ ಮೈಸೂರಿಗೆ ಅಥವಾ ಮೈಸೂರಿನಿಂದ ಬೆಂಗಳೂರಿಗೆ ಹೋಗಬೇಕಾದರೆ ಹಲಗೂರು ಮೂಲಕವೇ ಹೋಗಬೇಕು. ಜತೆಗೆ ಹಲಗೂರಿನಲ್ಲಿ ಮುತ್ತತ್ತಿ, ಬಸವನ ಬೆಟ್ಟ, ಅಂತರವಳ್ಳಿ ಸಿದ್ದೇಶ್ವರ, ಚಿಲ್ಲಾಪುರದ ಸಿದ್ದಪ್ಪಾಜಿ ಸೇರಿದಂತೆ ಹಲವು ಪ್ರವಾಸಿ ತಾಣಗಳು ಇದೆ. ರಜಾ ದಿನಗಳಲ್ಲಿ ಹೆಚ್ಚು ಪ್ರವಾಸಿಗರು ಈ ಸ್ಥಳಗಳಿಗೆ ಬರುತ್ತಾರೆ. ಈಗಾಗಲೇ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಬಹುತೇಕ ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿದೆ. ಈ ಮಧ್ಯೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಕೊರತೆಯು ಎದುರಾಗಿದೆ.
ಸೋಮವಾರ ಹಲಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಜನರು ಕೆಲಸ ಕಾರ್ಯಗಳನ್ನೆಲ್ಲ ಬಿಟ್ಟು ಗ್ಯಾಸ್ ಸಿಲಿಂಡರ್‌ಗಾಗಿ ಏಜೆನ್ಸಿಗಳ ಮುಂದು ಕಾದು ನಿಂತಿದ್ದರು. ಕೂಡಲೇ ಸಂಬಂಧಪಟ್ಟವರು ಎಚ್ಚೆತ್ತು ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಸಾರ್ವಜನಿಕರು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net